ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡಲು ಆಗ್ರಹ

G.H.THIPPAREDDY (3)
Published on

ಚಿತ್ರದುರ್ಗ: ಜಿಲ್ಲೆಯಲ್ಲಿ 6 ಬಾರಿ ಶಾಸಕರಾಗಿ ಚುನಾಯಿತರಾಗಿರುವ ಜಿ.ಎಚ್.ತಿಪ್ಪಾರೆಡ್ಡಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡದಿದ್ದರೆ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ನಗರಸಭೆ ಸದಸ್ಯ ಶ್ರೀನಿವಾಸ್ ಎಚ್ಚರಿಕೆ ನೀಡಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿ.ಎಚ್.ತಿಪ್ಪಾರೆಡ್ಡಿ ಕಾರಣಕ್ಕೆ ಚಿತ್ರದುರ್ಗ ನಗರಸಭೆಯಲ್ಲಿ ಬಿಜೆಪಿ ಪ್ರಥಮ ಬಾರಿಗೆ ಬಹುಮತಗಳಿಸಿದೆ. ಸ್ಥಳೀಯ ಸಂಸ್ಥೆಗಳಲ್ಲೂ ಪಕ್ಷ ಪ್ರಾಬಲ್ಯ ಸಾಧಿಸಿದೆ. ರಾಜಕೀಯದಲ್ಲೂ ಹಿರಿಯ ಧುರೀಣರಿದ್ದು, ಬಿಎಸ್‌ವೈ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ತಿಪ್ಪಾರೆಡ್ಡಿ ಅವರಿಗೆ ಈಗಾಗಲೇ 72 ವರ್ಷ ವಯಸ್ಸಾಗಿದ್ದು, ಹಿರಿತನ ಪರಿಗಣಿಸಿ ಸಚಿವ ಸ್ಥಾನ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಸ್ಥಳೀಯ ಸಂಸ್ಥೆಗಳ ಎಲ್ಲ ಚುನಾಯಿತ ಬಿಜೆಪಿ ಸದಸ್ಯರು ಪತ್ರ ಬರೆದು ಒತ್ತಾಯಿಸುತ್ತೇವೆ ಎಂದರು.

ಫೆ.6ರಂದು ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ಸಿಗದೇ ಇದ್ದರೆ ಚಿತ್ರದುರ್ಗ ನಗರಸಭೆಯ 17, ತಾಪಂ 6, ಜಿಪಂ 1, ಗ್ರಾಪಂ 18 ಅಧ್ಯಕ್ಷರು ಸೇರಿ ಒಟ್ಟು 100ಕ್ಕೂ ಹೆಚ್ಚು ಸದಸ್ಯರು ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಚುನಾಯಿತ ಪ್ರತಿನಿಧಿಗಳಾದ ವೆಂಕಟೇಶ್, ಹರೀಶ್, ಜಯಪ್ಪ, ರಾಜೇಶ್, ಪ್ರಾಣೇಶ್, ಇಂದ್ರಪ್ಪ ಪ್ರಕಾಶ್, ರೂಪಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net