ಮಿಷನ್ ಇಂದ್ರಧನುಷ್ ಲಸಿಕಾ ಅಭಿಯಾನ

PALAKSHA
Published on

ಚಿತ್ರದುರ್ಗ: ಮಕ್ಕಳು, ಗರ್ಭಿಣಿಯರಿಗೆ ಮಿಷನ್ ಇಂದ್ರಧನುಷ್ ಅಭಿಯಾನದಡಿ ಲಸಿಕೆ ಹಾಕುವ 2ನೇ ಸುತ್ತಿನ ಕಾರ್ಯಕ್ರಮ ಜ.3ರಿಂದ 11ರ ವರೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಿಷನ್ ಇಂದ್ರಧನುಷ್ 2ನೇ ಹಂತದ ಲಸಿಕಾ ಕಾರ್ಯಕ್ರಮದ ಸಿದ್ಧತಾ ಸಭೆಯಲ್ಲಿ ಮಾತನಾಡಿ, 827 ಮಕ್ಕಳು ಹಾಗೂ 89 ಗರ್ಭಿಣಿಯರಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಕುಮಾರಸ್ವಾಮಿ ಮಾತನಾಡಿ, ಡಿ.11ರಿಂದ 31ರ ವರೆಗೆ ಏರ್ಪಡಿಸಿದ್ದ ಡಿಪಿಟಿ ಮತ್ತು ಟಿಡಿ ಲಸಿಕಾ ಅಭಿಯಾನವನ್ನು ಜ.10ರ ವರೆಗೆ ವಿಸ್ತರಿಸಲಾಗಿದೆ ಎಂದರು.

ಆರೋಗ್ಯ ಇಲಾಖೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿ ಡಾ.ರೇಣುಪ್ರಸಾದ್, ಡಾ.ಚಂದ್ರಶೇಖರ ಕಂಬಾಳಿ ಮಠ, ಡಾ.ಸುಧಾ, ಡಾ.ಆನಂದ ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಸ್.ರಾಜಾನಾಯಕ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net