ಪಿಒಕೆ ಶೀಘ್ರ ಭಾರತದ ವಶಕ್ಕೆ

CTD 15 BJP MALAPPANA HATTI
Published on

ಚಿತ್ರದುರ್ಗ: ಮತ್ತೊಂದು ಅವಧಿಗೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ಅನೇಕ ಜನಪರ ಯೋಜನೆಗಳನ್ನು ಜಾರಿ ಗೊಳಿಸಿದ್ದಾರೆ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾನುವಾರ ಮಾಳಪ್ಪನಹಟ್ಟಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, 70 ವರ್ಷ ದೇಶವನ್ನಾಳಿದ್ದ ಕಾಂಗ್ರೆಸ್ಸಿಗೆ ಅಧಿಕಾರ ಮುಖ್ಯವಾಗಿತ್ತೇ ವಿನಾ ದೇಶದ ಅಭಿವೃದ್ಧಿ ಬೇಕಾಗಿರಲಿಲ್ಲ ಎಂದು ದೂರಿದರು.

ನೆಹರು ಕಾಲದಿಂದಲೂ ಜಮ್ಮು-ಕಾಶ್ಮೀರದಲ್ಲಿದ್ದ 370ನೇ ರದ್ದುಗೊಳಿಸುವಂಥ ಮೋದಿ ಅವರ ದಿಟ್ಟ ನಿರ್ಧಾರವನ್ನು ಸಹಿಸಲಾಗದೆ ಕಾಂಗ್ರೆಸ್ ಸಲ್ಲದ ಅಪಪ್ರಚಾರದಲ್ಲಿ ತೊಡಗಿದೆ. ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ತಂದಿದ್ದು, ಶೀಘ್ರದಲ್ಲೇ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ನಮ್ಮ ವಶಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಂಥ ಕಠಿಣ ಸವಾಲುಗಳು ಎದುರಾದರೂ ಎಲ್ಲವನ್ನು ಮೀರಿ ಕೇಂದ್ರ ಸರ್ಕಾರ ಈಗ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದೆ ಎಂದ ಶಾಸಕರು, ಪ್ರಧಾನಿ ಕರೆಯಂತೆ ಆತ್ಮನಿರ್ಭರ ಭಾರತ ಗುರಿ ಸಾಧನೆಗೆ ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್, ಮುಖಂಡರಾದ ಸಂಪತ್‌ಕುಮಾರ್, ಕಲ್ಲೇಶಯ್ಯ, ವಿರುಪಾಕ್ಷ ಯಾದವ್, ಶಂಭು, ಮಾಳಪ್ಪನಹಟ್ಟಿ ಈಶಣ್ಣ, ಕುರಿ ನಾಗರಾಜ್, ಮಂಜುಳಾ, ಸುಧಾ, ಗೀತಮ್ಮ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net