

ಚಿತ್ರದುರ್ಗ: ಜಿಲ್ಲೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸುವ ಹಾಗೂ ಕಾನೂನು ಭಂಗ ಪ್ರಸಂಗಗಳು ಇತ್ತೀಚೆಗೆ ಹೆಚ್ಚಾಗಿವೆ ಎಂದು ಆರೋಪಿಸಿರುವ ರೈತ ಸಂಘದ ಪ್ರಮುಖರು, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗಕ್ಕೆ ಅದರದ್ದೆ ಆದ ಸಾಂವಿಧಾನದ ಚೌಕಟ್ಟು ಹಾಗೂ ಶಾಸನಬದ್ಧ ಅಧಿಕಾರಗಳಿವೆ.
ಇವುಗಳಲ್ಲಿ ಯಾವುದೇ ಒಂದು ಮೇಲುಗೈ ಸಾಧಿಸಿದರೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗುತ್ತದೆ. ಆದ್ದರಿಂದ ಕಾರ್ಯಾಂಗದ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕು.
ಈ ನಿಯಮಗಳ ಉಲ್ಲಂಘನೆ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ಗೆ ಬರೆದ ಪತ್ರವನ್ನು ಎಡಿಸಿ ಸಿ.ಸಂಗಪ್ಪಗೆ ಸಲ್ಲಿಸಿದರು.
ರಾಜ್ಯ ರೈತ ಸಂಘದ ಕಾರ್ಯದರ್ಶಿ ಟಿ.ನುಲೇನೂರು ಶಂಕ್ರಪ್ಪ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‌ಬಾಬು, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಮುಖಂಡ ಹನುಮಂತರೆಡ್ಡಿ ಇದ್ದರು.