ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಸಲ್ಲ

CTD 13 RITA APMC
Published on

ಚಿತ್ರದುರ್ಗ: ಕೃಷಿ ಮಾರುಕಟ್ಟೆ ಕಾಯ್ದೆ ಉದ್ದೇಶಿತ ತಿದ್ದುಪಡಿ ವಿರೋಧಿಸಿ ರೈತ ಸಂಘದ ಪ್ರಮುಖರು ಬುಧವಾರ ಡಿಸಿಗೆ ಮನವಿ ಸಲ್ಲಿಸಿದರು.

ದೇಶದಲ್ಲಿಂದು ಲಕ್ಷಾಂತರ ಕೋಟಿ ರೂ. ಮೌಲ್ಯದ ಮಾರುಕಟ್ಟೆಗಳಿವೆ. ಬೆಳೆಗಳಿಗೆ ಉತ್ತಮ ಬೆಲೆ ಕೊಡಿಸುವ ನಿಟ್ಟಿನಲ್ಲಿ ಮಾರುಕಟ್ಟೆ ಸಮಿತಿಗಳು ಕೆಲಸ ಮಾಡುತ್ತಿವೆ.

ಇಂಥ ಸನ್ನಿವೇಶದಲ್ಲಿ ಕಾರ್ಪೋರೇಟ್ ಕಂಪನಿಗಳ ಅನುಕೂಲಕ್ಕಾಗಿ, ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಯ್ದೆಗೆ ತಿದ್ದುಪಡಿಯಾದರೆ ಸರ್ಕಾರದ ಎಪಿಎಂಸಿಗಳು ಸಂಪೂರ್ಣ ನಶಿಸುತ್ತವೆ. ಆದ್ದರಿಂದ ತಿದ್ದುಪಡಿ ಕೈಬಿಟ್ಟು ರೈತರ ಹಿತ ರಕ್ಷಿಸಬೇಕು. ಕರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಗ್ರಾಹಕರ ಮೇಲೆ ಹೆಚ್ಚಾಗಿರುವ ವಿದ್ಯುತ್ ಬಿಲ್ ಹೊರೆ ತಪ್ಪಿಸಬೇಕೆಂದು ರೈತ ಮುಖಂಡರು ಒತ್ತಾಯಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಪ್ರಧಾನ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ, ಮುಖಂಡರಾದ ಜಿ.ಕೆ.ನಾಗರಾಜ, ಶಂಕ್ರಪ್ಪ, ರಾಜಶೇಖರಪ್ಪ, ನಾಗಪ್ಪ, ಜಯಪ್ಪ,ಸದಾಶಿವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net