ಕಟೀಲು ಇನ್ನೂ ಚಿಕ್ಕವರು

MUNIYAPPA KH
Published on

ಚಿತ್ರದುರ್ಗ: ರಾಜಕೀಯದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾತನಾಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಇನ್ನೂ ಚಿಕ್ಕವರೆಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಚ್.ಮಂಜುನಾಥ್ ಅವರ ನಿವಾಸಕ್ಕೆ ಸೋಮವಾರ ಭೇಟಿ ಕೊಟ್ಟಿದ್ದ ವೇಳೆ ಖರ್ಗೆ ರಾಜಕೀಯವಾಗಿ ಆರಿದ ದೀಪವೆಂಬ ಕಟೀಲು ಹೇಳಿಕೆಗೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಸಿದ್ಧಾಂತದಿಂದಾಗಿ ಖರ್ಗೆ 11 ಚುನಾವಣೆಗಳಲ್ಲಿ ಗೆದ್ದಿದ್ದಾರೆ. ಈ ಮಟ್ಟದ ಗೆಲುವನ್ನು ಕಂಡಿರುವ ನಾಯಕರು ಬಿಜೆಪಿಯ ಲ್ಲಿ ಯಾರಿದ್ದಾರೆ? ಅಟಲ್ ಬಿಹಾರಿ ವಾಜಪೇಯಿ, ಲಾಲ್‌ಕೃಷ್ಣ ಆಡ್ವಾಣಿ ಸೋತಿಲ್ವಾ? ಅನುಭವ ಕೊರತೆಯಿಂದ ಕಟೀಲು ಹೀಗೆಲ್ಲ ಮಾತನಾಡಿದ್ದಾರೆ.

ದಕ್ಷಿಣ ಭಾರತದ ಕರ್ನಾಟಕದಲ್ಲಿ ಬಿಜೆಪಿ ಇದೆ. ಉತ್ತರ ಭಾರತದ ಒಂದಲ್ಲ ಒಂದು ರಾಜ್ಯದಲ್ಲಿ ಬಿಜೆಪಿ ಸೋಲುತ್ತಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಳ್ಳಬೇಕು. ಹಿಂದು-ಮುಸ್ಲಿಂರನ್ನ ಬೇರ್ಪಡಿಸಲು ಕೇಂದ್ರ ಸಿಎಎ ಜಾರಿಗೊಳಿಸಿದ್ದು, ಪ್ರಧಾನಿಗೆ ಪಾಠ ಕಲಿಸುವ ಸಮಯ ಬಂದಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net