ಮಾಸ್ಕ್ ಧರಿಸದೇ ಇದ್ದವರಿಗೆ ಬಿತ್ತು ದಂಡ

ctd 5 danda
Published on

ಚಿತ್ರದುರ್ಗ: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಓಡಾಡುವವರಿಗೆ 100 ರೂ. ದಂಡ ವಿಧಿಸಲಾಗುವುದೆಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಹೇಳಿಕೆ ನೀಡಿದ ಮಾರನೇ ದಿನವೇ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು, ನಗರದ ವಿವಿಧೆಡೆ ಬಿಂದಾಸ್ ಆಗಿ ಅಡ್ಡಾಡುತ್ತಿದ್ದವರಿಗೆ ದಂಡದ ಬರೆ ಎಳೆದಿದ್ದಾರೆ.

ಮಂಗಳವಾರ ಬೆಳಗ್ಗೆ ನಗರಸಭೆ ಆಯುಕ್ತ ಜೆ.ಟಿ.ಹನುಮಂತರಾಜು ನೇತೃತ್ವದಲ್ಲಿ ಕಾರ‌್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ ಬೈಕ್ ಸವಾರ ಸಹಿತ ಮಾಸ್ಕ್ ಧರಿಸದೇ ಇರುವಂಥವರಿಗೆ ದಂಡ ವಿಧಿಸಿತು. ಮೊದಲ ದಿನವೇ 100 ಜನರಿಗೆ ದಂಡ ವಿಧಿಸಲಾಗಿದೆ ಎಂದು ಹನುಮಂತರಾಜು ತಿಳಿಸಿದ್ದಾರೆ.

ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಲಾಗುವುದು. ಪಿಎಸ್‌ಐ, ಪಿಡಿಒ ದರ್ಜೆ ಅಧಿಕಾರಿಗಳು ಹಾಗೂ ಆರೋಗ್ಯ ನಿರೀಕ್ಷಕರಿಗೆ ದಂಡ ವಿಧಿಸುವ ಅಧಿಕಾರ ಕೊಡಲಾಗಿದೆ. ಹಸಿರು ವಲಯದಲ್ಲಿರುವ ಚಿತ್ರದುರ್ಗವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವೆಂದು ಡಿಸಿ ಹೇಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net