ಅತ್ಯಾಚಾರಿಗೆ ಏಳು ವರ್ಷ ಕಠಿಣ ಸಜೆ

COURTdownload
Published on

ಚಿತ್ರದುರ್ಗ: ಅತ್ಯಾಚಾರ ಎಸಗಿದ್ದ ಅಪರಾಧಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 7 ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಗ್ರಾಮಾಂತರ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 2015 ಏ.26ರಂದು ಎಂ.ಪಿ.ನಾಗರಾಜ ಎಂಬಾತ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರು ದಾಖಲಾಗಿತ್ತು.

ಗ್ರಾಮಾಂತರ ಠಾಣೆ ಸಿಪಿಐ ಡಿ.ನಾಗರಾಜು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ.ವಟವಟಿ ಅವರು, ಅಪರಾಧಿಗೆ ಸಜೆ ಹಾಗೂ 5 ಸಾವಿರ ರೂ.ದಂಡ ವಿಧಿಸಿದ್ದಾರೆ.

ದಂಡದ ಹಣವನ್ನು ನೊಂದ ಯುವತಿಗೆ ಕೊಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎನ್.ಎಸ್.ಮಲ್ಲಯ್ಯ ವಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net