ರಾಜ್ಯದಲ್ಲೇ ವಿಶಿಷ್ಟ ಜಿಲ್ಲೆ ಚಿತ್ರದುರ್ಗವನ್ನು ಅಭಿವೃದ್ಧಿ ಪಡಿಸೋಣ:ಜಿಲ್ಲಾಧಿಕಾರಿ ಹೇಳಿಕೆ

chitradurga republic day
Published on

ಚಿತ್ರದುರ್ಗ: ಕರ್ನಾಟಕದಲ್ಲಿ ಒಂದು ವಿಶಿಷ್ಟ ಜಿಲ್ಲೆಯಾಗಿರುವ ಚಿತ್ರದುರ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಅಭಿವೃದ್ಧಪಡಿಸಲು ನಾವೆಲ್ಲರೂ ಕಂಕಣ ಬದ್ಧರಾಗಿ ಶ್ರಮಿಸೋಣವೆಂದು ಜಿಲ್ಲಾಧಿಕಾರಿ ಆರ್.ವಿನೋತ್‌ಪ್ರಿಯಾ ಹೇಳಿದರು.

ಜಿಲ್ಲಾಡಳಿತ ನಗರದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 71ನೇ ಗಣರಾಜ್ಯೋತ್ಸವ ಸಮಾರಂಭ ದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರತಿ ನಾಗರಿಕನಿಗೆ ಮೂಲ ಸೌಲಭ್ಯಗಳಾದ ಶಿಕ್ಷಣ,ರಸ್ತೆ, ಕುಡಿಯುವ ನೀರು ಸೇರಿದಂತೆ ರಾಜ್ಯಮತ್ತು ಕೇಂದ್ರದ ಸವಲತ್ತುಗಳನ್ನು ತಲುಪಿಸುವಲ್ಲಿ ಜಿಲ್ಲಾಡಳಿತ ಅವಿರತವಾಗಿ ಶ್ರಮಿಸುತ್ತಿದೆ ಎಂದರು.

ಇದೇ ವೇಳೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಅಧಿಕಾರಿ,ಸಿಬ್ಬಂದಿಯನ್ನು ಗೌರವಿಸಲಾಯಿತು. ಇದೇ ಆಕರ್ಷಕ ಪಥ ಸಂಚಲನ ನಡೆಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ‌್ಯಕ್ರಮ ನಡೆಸಿಕೊಟ್ಟರು. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ,ಜಿಪಂ ಅಧ್ಯಕ್ಷೆ ಜಿ.ಎಂ.ವಿಶಾಲಾಕ್ಷಿ ನಟರಾಜ್,ಸಿಇಒ ಸಿ.ಸತ್ಯಭಾಮಾ,ಎಸ್ಪಿ ಡಾ.ಕೆ.ಅರುಣ್,ಎಎಸ್ಪಿ ಎಂ. ಬಿ.ನಂದಗಾವಿ,ಎಡಿಸಿ ಸಿ.ಸಂಗಪ್ಪ, ನಗರಸಭೆ ಆಯುಕ್ತ ಜಿ.ಟಿ.ನಟರಾಜು,ಎಸಿ ವಿ.ಪ್ರಸನ್ನಕುಮಾರ್,ತಹಸೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ಕುಡಾ ಆಯುಕ್ತ ಸೋಮಶೇಖರ್ ಸೇರಿದಂತೆ ಹಿರಿಯ ಅಧಿಕಾರಿಗಳು,ಜನಪ್ರತಿನಿಧಿಗಳು,ಗಣ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net