28ರಂದು ದುರ್ಗಕ್ಕೆ ಸಚಿವ ಈಶ್ವರಪ್ಪ

ks eshwarappa
Published on

ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಏ.28ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವ ಅವರು, ತಾಲೂಕಿನ ವಿವಿಧೆಡೆ ನರೇಗಾ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸುವರು.

ಸಂಜೆ 4.30ಕ್ಕೆ ಜಿಪಂ ಸಭಾಂಗಣದಲ್ಲಿ ನರೇಗಾ ಹಾಗೂ ಕುಡಿಯುವ ನೀರು ಸರಬರಾಜು ಕುರಿತು ಪರಿಶೀಲನಾ ಸಭೆ ಬಳಿಕ ಸಂಜೆ 6ಕ್ಕೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net