ಮಾಜಿ ಸಚಿವರಿಗೆ ಜೆಡಿಎಸ್ ಮನವಿ

PRATAP JOGI
Published on

ಚಿತ್ರದುರ್ಗ: ಜುಲೈ 1ರಿಂದ ಶಾಲೆಗಳನ್ನು ಪ್ರಾರಂಭಿಸಬಾರದು, ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಅವರಿಗೆ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ ಬುಧವಾರ ಒತ್ತಾಯಿಸಿದರು.

ಜುಲೈ 1ರಿಂದ ಶಾಲೆಗಳು ಪ್ರಾರಂಭವೆಂದು ಸರ್ಕಾರ ಹೇಳಿರುವುದು ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನವೊಂದಕ್ಕೆ 300 ಮೀರುತ್ತಿದೆ. ಆದ್ದರಿಂದ ಸೆಪ್ಪೆಂಬರ್ ನಂತರದಲ್ಲಿ ಶಾಲೆಗಳನ್ನು ಪ್ರಾರಂಭಿಸುವಂತೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net