ಸಿದ್ದರಾಮರೇಶ್ವರ, ವೇಮನ, ಅಂಬಿಗರ ಚೌಡಯ್ಯ ಜಯಂತಿ

BHOVI SWAMIJI
Published on

ಚಿತ್ರದುರ್ಗ: ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಜ.14 ರ ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.

ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಮಹಾಯೋಗಿ ವೇಮನ ಜಯಂತಿಯನ್ನು ಜ.19 ರಂದು ಬೆಳಗ್ಗೆ 11 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಆಚರಿಸಲಾಗುತ್ತಿದೆ. ಅಂದು ನಗರದ ನೀಲಕಂಠೇಶ್ವರ ದೇವಾಲಯದಿಂದ ಬೆಳಗ್ಗೆ 9.30 ಕ್ಕೆ ವೇಮನ ಅವರ ಭಾವಚಿತ್ರದ ಮೆರವಣಿಗೆ ರಂಗ ಮಂದಿರವರೆಗೆ ನಡೆಯಲಿದ್ದು,11 ಗಂಟೆಗೆ ವೇದಿಕೆ ಕಾರ್ಯಕ್ರಮವಿರುತ್ತದೆ.

ನಗರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜ.21 ರಂದು ಬೆಳಗ್ಗೆ 11.30 ಕ್ಕೆ ನಗರದ ತರಾಸು ರಂಗಮಂದಿರ ದಲ್ಲಿ ಆಯೋಜಿಸಲಾಗಿದೆ. ಜೋಗಿಮಟ್ಟಿ ರಸ್ತೆ ತಿಪ್ಪಿನಗಟ್ಟಮ್ಮ ದೇವಸ್ಥಾನದ ಬಳಿಯಿಂದ ಬೆಳಗ್ಗೆ 9.30 ಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರ ಮೆರವಣಿಗೆ ರಂಗಮಂದಿರ ತಲುಪಿ, ಅಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಎಡಿಸಿ ಸಿ.ಸಂಗಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net