ಜೆಡಿಎಸ್ ಟಿಕೆಟ್ ತಪ್ಪಿದ್ರೂ ಸ್ಪರ್ಧೆ

RAMESHBABU 595346
Published on

ಚಿತ್ರದುರ್ಗ: ಜೂನ್‌ನಲ್ಲಿ ನಡೆಯುವ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಜೆಡಿಎಸ್ ಮುಖಂಡ ರಮೇಶ್‌ಬಾಬು ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಟಿಕೆಟ್ ಕೈ ತಪ್ಪಿದರೆ ಬೇರೆ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು. ಕ್ಷೇತ್ರದಲ್ಲಿ ಒಟ್ಟು 1 ಲಕ್ಷ ಪದವೀಧರ ಮತದಾರರಿದ್ದು, ಹೊಸ ನೋಂದಾಣಿಗೆ ಇನ್ನು ಅವಕಾಶವಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net