ಸಚಿವ ರವಿ ರಾಜೀನಾಮೆಗೆ ಒತ್ತಾಯ

YADAVAREDDY
Published on

ಚಿತ್ರದುರ್ಗ: ಶೃಂಗೇರಿಯಲ್ಲಿ ನಡೆಯುತ್ತಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವಿರೋಧಿಸಿರುವ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಆಗ್ರಹಿಸಿದರು.

ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷ ಕಲ್ಕುಳಿ ವಿಠಲ ಹೆಗ್ಗಡೆ ವಿರುದ್ಧ ಸುಳ್ಳು ಆರೋಪ ಹೊರೆಸಿ, ಸಮ್ಮೇಳನದಲ್ಲಿ ನಾನು ಭಾಗವಹಿಸುವುದಿಲ್ಲ ಎಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದ ಕನ್ನಡ ಸಾರಸ್ವತ ಲೋಕಕ್ಕೆ ಅವಮಾನವಾಗಿದೆ. ಆದ್ದರಿಂದ ಸಚಿವರು ನಾಡಿನ ಜನರ ಕ್ಷಮೆಯಾಚಿಸಿ ಅವರ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದರು.

ಸಮ್ಮೇಳನದ ಅಧ್ಯಕ್ಷರ ಆಯ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧಿಕಾರ. ಪರಿಷತ್ ಸರ್ಕಾರದ ಅಧೀನದಲ್ಲಿ ಇಲ್ಲ ಎಂಬುದು ಸಚಿವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಸಚಿವರ ವಿರುದ್ಧ ದನಿ ಎತ್ತದ ಹಲವು ಸಾಹಿತಿಗಳ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ನಡೆಗೆ ಬೇಸರಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ದಾಸೇಗೌಡ, ಮುಖಂಡರಾದ ಬಸ್ತಿಹಳ್ಳಿ ಸುರೇಶ್‌ಬಾಬು ಹಾಗೂ ಕಾಂತರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net