ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

DC VINOD PRIYA (1)
Published on

ಚಿತ್ರದುರ್ಗ: ಮಾರ್ಚ್ 27ರಿಂದ ಏಪ್ರಿಲ್ 9ರ ವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಜಿಲ್ಲಾದ್ಯಂತ ಇರುವ 87 ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಝೆರಾಕ್ಸ್ ಅಂಗಡಿ ಹಾಗೂ ಇಂಟರ್‌ನೆಟ್ ಕೇಂದ್ರಗಳನ್ನು ಪರೀಕ್ಷಾ ನಡೆಯುವ ದಿನಾಂಕಗಳಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಮುಚ್ಚಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಪೋನ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net