

ಚಿತ್ರದುರ್ಗ: ಕರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿಯ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಸಹಾಯಕರನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಮಾರ್ಚ್ 27ರಿಂದ ಏಪ್ರಿಲ್ 9ರ ವರೆಗೆ ಪರೀಕ್ಷೆ ನಡೆಯಲಿದೆ ಎಂದರು.
ಕರೊನಾ ಸೋಂಕು ತಡೆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದಂತೆ ಅವರಿಗೆ ಕೇಂದ್ರದ ಆವರಣದೊಳಗೆ ಪ್ರವೇಶ ನೀಡಬೇಕು. ವಿದ್ಯಾರ್ಥಿಗಳು ಗುಂಪು ಸೇರದಂತೆ ನಿಗಾ ವಹಿಸಬೇಕು. ರಜೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗುಂಪು, ಗುಂಪಾಗಿ ಆಟವಾಡದಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು ಗಮನಹರಿಸಬೇಕು. ಮಕ್ಕಳು ಮನೆ ಬಿಟ್ಟು ಹೊರ ಬಾರದಂತೆ ಶಿಕ್ಷಕರು ಹಾಗೂ ಪೋಷಕರು ಗಮನ ಹರಿಸಬೇಕು ಎಂದು ಸೂಚಿಸಿದರು.