ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲೇಬೇಕು

HORATTI download
Published on

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಬೆಂಬಲ ಸೂಚಿಸಿದ್ದಾರೆ.

ನಗರದ ಮುರುಘಾ ಮಠಕ್ಕೆ ಗುರುವಾರ ಭೇಟಿ ನೀಡಿ ಶ್ರೀ ಶಿವಮೂರ್ತಿ ಶರಣರ ಆಶೀರ್ವಾದ ಪಡೆದು ಅವರೊಂದಿಗೆ ನಡೆಸಿದ ಸಮಾಲೋಚನೆ ವೇಳೆ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಪ್ರಸ್ತುತ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಸರಿಯಿದೆ. ಏನೇ ಗೊಂದಲಗಳಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಬೇಕು. ಇಲ್ಲವಾದಲ್ಲಿ ಮಕ್ಕಳಲ್ಲಿ ಓದುವ ಪ್ರವೃತ್ತಿ ಕ್ಷೀಣಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪರೀಕ್ಷೆಯೇ ಇಲ್ಲವಾದರೆ ಮಕ್ಕಳ ಉತ್ತೀರ್ಣ, ಮುಂದಿನ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಾಗುತ್ತವೆ. ಆದ್ದರಿಂದ ಪೋಷಕರು ಮಕ್ಕಳನ್ನು ಧೈರ್ಯದಿಂದ ಪರೀಕ್ಷೆಗೆ ಕಳುಹಿಸಬೇಕು. ಆದರೆ, ಜಾಗ್ರತೆ ವಹಿಸುವಂತೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಕೋವಿಡ್-19 ಸೋಂಕು ಸಂಪೂರ್ಣ ಹತೋಟಿಗೆ ಬರುವವರೆಗೂ, 10ನೇ ತರಗತಿವರೆಗಿನ ಎಲ್ಲ ಶಾಲೆಗಳನ್ನು ತೆರೆಯದಿರುವುದೇ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಜೆಡಿಎಸ್ ಮುಖಂಡ ಎಸ್.ವಿ.ಕೊಟ್ರೇಶ್, ವಕೀಲ ಪ್ರತಾಪ್ ಜೋಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net