ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

CTD DSS 11
Published on

ಚಿತ್ರದುರ್ಗ: ನ್ಯಾ.ಸದಾಶಿವ ಆಯೋಗದ ಶಿಫಾರಸ್ಸನ್ನು ಕೇಂದ್ರಕ್ಕೆ ಶೀಘ್ರ ಕಳಿಸುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರಮುಖರು ಶುಕ್ರವಾರ ಬೆಂಗಳೂರಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.

ಸದಾಶಿವ ಆಯೋಗ ವರದಿ ಜಾರಿ ನಿರ್ಲಕ್ಷೃದಿಂದಾಗಿ ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲು ಕಂಡಿದೆ. ಇದನ್ನರಿತು ಬಿಜೆಪಿ ಸರ್ಕಾರ ಕೂಡಲೇ ವರದಿ ಜಾರಿಗೆ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.

ಎಸ್‌ಸಿ, ಎಸ್‌ಟಿ ಕಾಲನಿಗಳಲ್ಲಿ ಮದ್ಯ ಮಾರಾಟಕ್ಕೆ ನಿಯಂತ್ರಣ, ಸಹಕಾರ ಸಂಘಗಳ ಅಧ್ಯಕ್ಷರ ಆಯ್ಕೆ ಹಾಗೂ ಖಾಸಗಿ ಉದ್ಯೋಗದಲ್ಲಿ ಮೀಸಲು ಜಾರಿ.

ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಭೂ ಒಡೆತನ ಯೋಜನೆಗೆ ತಿದ್ದುಪಡಿ, ಸರ್ಕಾರಿ ಶಾಲೆಗಳನ್ನು ಮುಚ್ಚದೇ ಆಂಗ್ಲ ಮಾಧ್ಯಮವನ್ನೂ ಪ್ರಾರಂಭಿಸಬೇಕು. ಬೆಲೆ ಏರಿಕೆಗೆ ತಕ್ಕಂತೆ ಎಸ್ಸಿ, ಎಸ್ಟಿ ವಿದ್ಯಾರ್ಥಿ ವೇತನ ಹೆಚ್ಚಳ ಹಾಗೂ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಸಮಿತಿ ಅಧ್ಯಕ್ಷ ಎಚ್.ಮಹಂತೇಶ್, ಮುಖಂಡರಾದ ಕುಂಚಿಗನಾಳ್ ಮಹಾಲಿಂಗಪ್ಪ, ಕೆಂಚಪ್ಪ ಹಂಚಿನಮನೆ, ಶಿವಾನಂದ ಮಾದರ ಮೊದಲಾದ ಪ್ರಮುಖರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net