

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ವಿವಿಧೆಡೆ 11 ಶೇಂಗಾ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಶೇಂಗಾ ಬೆಳೆಯನ್ನು ಬೆಂಬಲ ಬೆಲೆಯಡಿ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ಖರೀದಿಸಲಿದೆ.
ಪ್ರಸಕ್ತ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಶೇಂಗಾ ಬೆಳೆಗೆ ಪ್ರತಿ ಕ್ವಿಂ.5090 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದಿರುವ ಶೇಂಗಾ ಸಂಗ್ರಹಣೆಗೆ ಕೃಷಿ ಇಲಾಖೆ ಫ್ರೂಟ್ಸ್ ದತ್ತಾಂಶದಿಂದ ರೈತರ ಮಾಹಿತಿ, ಐಡಿ ನಂಬರ್ ಮೂಲಕ ಪಡೆದು ಶೇಂಗಾ ಖರೀದಿಗೆ ನೋಂದಣಿ ಮಾಡಿಕೊಳ್ಳಲಾಗುತ್ತದೆ.
ಮಾಹಿತಿಗಾಗಿ ಚಿತ್ರದುರ್ಗ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ಕಚೇರಿ ಮೊಬೈಲ್ ಸಂಖ್ಯೆ 9591812126ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.