ಸ್ವಾಮಿ ವಿವೇಕಾನಂದ ಜಯಂತಿ

SWAMY VIVEKANANDA download
Published on

ಚಿತ್ರದುರ್ಗ: ಜ.12ರ ಬೆಳಿಗ್ಗೆ 10.30ಕ್ಕೆ ತರಾಸು ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನಾಚರಣೆ ಜಿಲ್ಲಾಡಳಿತ ಹಮ್ಮಿಕೊಂಡಿದೆ.

ಚಿತ್ರದುರ್ಗ ಶಾರದ ರಾಮಕೃಷ್ಣ ಆಶ್ರಮದ ಮುಖ್ಯಸ್ಥ ಶ್ರೀ ಸ್ವಾಮಿ ಬ್ರಹ್ಮನಿಷ್ಠಾನಂದಜೀ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಉದ್ಘಾಟಿಸಲಿದ್ದು, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಸಂಸದ ಎ.ನಾರಾಯಣಸ್ವಾಮಿ, ಜಿಪಂ ಅಧ್ಯಕ್ಷ ಜಿ.ಎಂ.ವಿಶಾಲಾಕ್ಷಿ ನಟರಾಜ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net