ಬಾಲ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಂಡರೆ ಸೆರೆವಾಸ

ctd 12 balal karamika (1)
Published on

ಚಿತ್ರದುರ್ಗ: ಬಾಲಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಡಿಸಿ ಆರ್.ವಿನೋತ್‌ಪ್ರಿಯಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ, ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಆಟೋ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರಿಗೆ ದಂಡ ಹಾಗೂ 2 ವರ್ಷದವರೆಗೆ ಸೆರೆವಾಸ ವಿಧಿಸಬಹುದು. ತಪ್ಪಿತಸ್ಥ ಮಾಲೀಕರು ಹಾಗೂ ಪೋಷಕರ ವಿರುದ್ಧ ಮೊಕದ್ದಮೆ ದಾಖಲಿಸಬಹುದು

ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ 10 ವರ್ಷದ ಒಳಗಿನ ಮಕ್ಕಳಿಗೆ ಕರೊನಾ ಹೆಚ್ಚು ಬಾಧಿಸುವ ಸಾಧ್ಯತೆ ಇದೆ. ಹಾಗಾಗಿ ಪೋಷಕರು ಹೆಚ್ಚು ಜಾಗೃತಿ ವಹಿಸಬೇಕೆಂದರು.

ಎಸ್ಪಿ ಜಿ.ರಾಧಿಕಾ, ಎಸಿ ವಿ.ಪ್ರಸನ್ನ, ತಹಸೀಲ್ದಾರ್ ಜೆ.ಸಿ.ವೆಂಕಟೇಶಯ್ಯ,ಜಿಲ್ಲಾ ಕಾರ್ಮಿಕ ಅಧಿಕಾರಿ ಡಿ.ಎಂ.ವಿನುತಾ, ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯಪ್ಪ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net