ಎಸ್.ಕೆ.ಮಲ್ಲಪ್ಪ ನಿಧನ

CTD 3 SK Mallappa DEATH
Published on

ಚಿತ್ರದುರ್ಗ: ತಾಲೂಕಿನ ಗುತ್ತಿನಾಡು ನಿವಾಸಿ, ಜನತಾ ಪರಿವಾರದ ಹಿರಿಯ ಮುಖಂಡ ಎಸ್.ಕೆ.ಮಲ್ಲಪ್ಪ (81) ಮಂಗಳವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಅವರಿಗೆ ಪತ್ನಿ ಎಂ.ಕೆ.ಹಟ್ಟಿ ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಹಾಗೂ ಮೂವರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸಂಜೆ ಗ್ರಾಮದಲ್ಲಿ ನೆರವೇರಿತು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ತಾಲೂಕು ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸೇರಿದಂತೆ ಹಿರಿಯ ರಾಜಕಾರಣಿಗಳೊಂದಿಗೆ ನಿಕಟ ಒಡನಾಟ ಹೊಂದಿದ್ದರು. ಚಿಕ್ಕ ವಯಸ್ಸಿನಲ್ಲೇ ಗ್ರಾಪಂ ಸದಸ್ಯ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಆರಂಭದ ದಿನಗಳಲ್ಲಿ ಜಿಲ್ಲಾ ನೀರಾವರಿ ಹೋರಾಟ ಸಮಿತಿಯಲ್ಲೂ ಸಕ್ರಿಯವಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net