ದುರ್ಗದಲ್ಲಿ ಜಾಗೃತಿ ಸಮಾವೇಶ

BJP 1200px-Bharatiya_Janata_Party_logo.svg
Published on

ಚಿತ್ರದುರ್ಗ: ನಗರ ಮತ್ತು ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಸಮಾವೇಶ ಜ.9ರ ಬೆಳಗ್ಗೆ 11ಕ್ಕೆ ಹೊಳಲ್ಕೆರೆ ರಸ್ತೆ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ನಗರಾಧ್ಯಕ್ಷ ಶಶಿಕುಮಾರ್, ಗ್ರಾಮಾಂತರ ಅಧ್ಯಕ್ಷ ನಂದಿನಾಗರಾಜ್ ಅಧಿಕಾರ ಸ್ವೀಕರಿಸಲಿದ್ದಾರೆ. ಸಂಸದ ಎ.ನಾರಾಯಣಸ್ವಾಮಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್, ಪ್ರಧಾನ ಕಾರ‌್ಯದರ್ಶಿ ಮುರುಳಿ, ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್, ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್, ಮುಖಂಡ ಸಿದ್ದೇಶ್‌ಯಾದವ್ ಭಾಗವಹಿಸಲಿದ್ದಾರೆ ಎಂದು ವಕ್ತಾರ ದಗ್ಗೆ ಶಿವಪ್ರಕಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net