ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗೆ ಅವಿರೋಧ ಆಯ್ಕೆ

CTD 11 PLD BANK
Published on

ಚಿತ್ರದುರ್ಗ: ನಗರದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಕಸಬಾ ಹೋಬಳಿಯ ಜೆ.ಶಿವ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಭರಮ ಸಾಗರದ ವಿಜಯಲಕ್ಷ್ಮೀ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಬ್ಯಾಂಕ್‌ನಲ್ಲಿ ಹೊಸ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಆದ ತಹಸೀಲ್ದಾರ್ ಜೆ.ಸಿ.ವೆಂಕಟೇಶಯ್ಯ ಘೋಷಿಸಿದರು. ಬ್ಯಾಂಕಿನ ಇತರ ನಿರ್ದೇಶಕರು, ಅಧಿಕಾರಿ, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net