ಸುತ್ತೂರು ಜಾತ್ರೆ

CTD 19 SUTTUR
Published on

ಚಿತ್ರದುರ್ಗ: ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರಾ ಮಹೋತ್ಸವ ಜ.21ರಿಂದ 26ರ ವರೆಗೆ ಮೈಸೂರು ಜಿಲ್ಲೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಜಾತ್ರೆ-ಜನಜಾಗೃತಿ ಯಾತ್ರೆ ಅಂಗವಾಗಿ ವೀರಭದ್ರೇಶ್ವರ ಕೆಂಡೋತ್ಸವ, ರಥೋತ್ಸವ, ತೆಪ್ಪೋತ್ಸವ, ಲಕ್ಷದೀಪೋತ್ಸವ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆ ಆಯೋಜಿಸಲಾಗಿದೆ. ಕರ್ತೃಗದ್ದುಗೆಯಲ್ಲಿ ನಂಜುಂಡೇಶ್ವರ, ನಂದಿ ಹಾಗೂ ವಿನಾಯಕ ಮೂರ್ತಿಗಳ ಪುನರ್ ಪ್ರತಿಷ್ಠಾಪಿಸಲಾಗುತ್ತಿದೆ.

ರಾಜ್ಯಮಟ್ಟದ 28ನೇ ಭಜನಾ ಮೇಳ ಮತ್ತು ಏಕತಾರಿ ಸ್ಪರ್ಧೆ, ವಸ್ತು ಪ್ರದರ್ಶನ, ಕೃಷಿ ಮೇಳ, ಸಾವಯವ ಕೃಷಿ ಮತ್ತು ಜಲ ವೈಜ್ಞಾನಿಕ ಬಳಕೆ ಕುರಿತ ವಿಚಾರ ಸಂಕಿರಣ, ರಾಜ್ಯಮಟ್ಟದ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಚಿತ್ರಸಂತೆ, ಸಾಮೂಹಿಕ ವಿವಾಹ, ಸೋಬಾನೆ ಪದ, ರಂಗೋಲಿ, ಗಾಳಿಪಟ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಕುಸ್ತಿ ಪಂದ್ಯಾವಳಿ, ಕ್ಯಾನ್ಸರ್ ತಪಾಸಣಾ ಶಿಬಿರ, ದೋಣಿ ವಿಹಾರ, ದೇಸಿ ಆಟಗಳು, ದನಗಳ ಜಾತ್ರೆ, ಸಾಂಸ್ಕೃತಿಕ ಮೇಳ ಹಾಗೂ ಬೀದಿನಾಟಕ ಏರ್ಪಡಿಸಲಾಗಿದೆ. ಭಕ್ತರಿಗೆ ಪ್ರಸಾದ ಹಾಗೂ ವ್ಯವಸ್ಥೆ ಇರುತ್ತದೆ ಎಂದು ಜಾತ್ರಾ ಮಹೋತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net