ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಪುನಾರಚನೆ

SHASHIKALA NATARAJ
Published on

ಚಿತ್ರದುರ್ಗ: ಜಿಪಂ ಅಧ್ಯಕ್ಷೆ ಜಿ.ಎಂ.ವಿಶಾಲಾಕ್ಷಿ ನಟರಾಜ್ ಅಧ್ಯಕ್ಷತೆಯಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಪುನಾ ರಚಿಸಲಾಗಿದೆ.

ಜಿಪಂ ಸಿಇಒ ಸಿ.ಸತ್ಯಭಾಮಾ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರು, ಡಿಎಚ್‌ಒ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ವಾರ್ತಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಹಾಗೂ ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸದಸ್ಯರಾಗಿರುತ್ತಾರೆ.

ಸಮಿತಿಗೆ ಮೂವರು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕಲೆ, ಸಂಸ್ಕೃತಿ ಮತ್ತು ಅಕಾಡೆಮಿಗಳಿಂದ ಮೂವರು ಪ್ರತಿನಿಧಿಗಳು ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net