45 ಸೋಂಕಿತರಲ್ಲಿ 43 ಚೇತರಿಕೆ

Dr. PALAKSHA
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಮಹಿಳೆ ಹಾಗೂ ಬಾಲಕನಲ್ಲಿ ಕರೊನಾ ಸೋಂಕು ದೃಢಪಡಿಟ್ಟಿರುವ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಡಿಎಚ್‌ಒ ಡಾ.ಸಿ.ಎಲ್.ಪಾಲಾಕ್ಷ ತಿಳಿಸಿದ್ದಾರೆ.

ಹಿರಿಯೂರಿನ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದ್ದು, ಅವರನ್ನು ನಗರದ ಕೋವಿಡ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ 39 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 39 ಜನರ ವರದಿಯೂ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 2378 ಜನ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 43 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 4442 ಜನರ ಗಂಟಲು, ಮೂಗು ದ್ರವದ ಮಾದರಿ ಸಂಗ್ರಹಿಸಲಾಗಿದ್ದು, 4269 ಜನರ ವರದಿ ನೆಗೆಟಿವ್ ಬಂದಿದೆ. 130ನ್ನು ತಿರಸ್ಕರಿಸಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net