ಕೋಟೆ ಜನರಿಗೆ ಸಿಹಿ-ಕಹಿ

NIJALINGAPPA S HOUSE (1)
Published on

ಚಿತ್ರದುರ್ಗ: ವೀರ ಮದಕರಿನಾಯಕ ಹಾಗೂ ಒನಕೆ ಓಬವ್ವನ ನಾಡು ಚಿತ್ರದುರ್ಗವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಘೋಷಣೆ ಮೂಲಕ ಬಜೆಟ್‌ನಲ್ಲಿ ಜಿಲ್ಲೆಯ ಪ್ರಗತಿಗೆ ಕನಸಿನ ಬೀಜ ಬಿತ್ತಲಾಗಿದೆ ಎಂದು ಅರ್ಥೈಸಲಾಗುತ್ತಿದೆ.

ಮುರುಘಾಮಠದಲ್ಲಿ ನಿರ್ಮಿಸುತ್ತಿರುವ ವಿಶ್ವಗುರು ಬಸವಣ್ಣನ ಪ್ರತಿಮೆಗೆ 20 ಕೋಟಿ ರೂ. ಹಾಗೂ ರಾಷ್ಟ್ರ ನಾಯಕ ಎಸ್.ನಿಜಲಿಂಗಪ್ಪ ವಾಸವಿದ್ದ ಮನೆಯನ್ನು ಸ್ಮಾರಕವಾಗಿಸಲು 5 ಕೋಟಿ ರೂ. ಮೀಸಲಿಡುವ ಮೂಲಕ ಸಿಎಂ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ಇದೇ ವೇಳೆ ಬರಪೀಡಿತ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಿಲ್ಲ, ಭದ್ರಾ ಮೇಲ್ದಂಡೆ ಯೋಜನೆಗಳ ತ್ವರಿತ ಅನುಷ್ಠಾನದ ಪ್ರಮುಖ ಬೇಡಿಕೆಗಳನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ಕೇಳಿ ಬಂದಿದೆ.

ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಲು, ದಾವಣಗೆರೆ-ತುಮಕೂರು ನೇರ ರೈಲು ಮಾರ್ಗ ಪೂರ್ಣಕ್ಕೆ ಯಾವುದೇ ಪ್ರಸ್ತಾಪ ಮಾಡಲಾಗಿಲ್ಲ.

ನಿರ್ದಿಷ್ಟ ಮೊತ್ತದ ಪ್ರಸ್ತಾಪವಿಲ್ಲದಿದ್ದರೂ ಚಿತ್ರದುರ್ಗವನ್ನು ಅಭಿವೃದ್ಧಿ ಪಡಿಸುವ ಮುಖ್ಯಮಂತ್ರಿ ಹೇಳಿಕೆ, ಜಿಲ್ಲೆಗೆ ಸಿಕ್ಕಿರುವ ಪ್ರಾಮುಖ್ಯತೆ ಎಂದೇ ಆರ್ಥಿಕ ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.

ಶ್ರೀ ಶಿವಮೂರ್ತಿ ಮುರುಘಾ ಶರಣರ ಮಹತ್ವಾಕಾಂಕ್ಷೆಯ 325 ಅಡಿ ಎತ್ತರದ ಕಂಚಿನ ಬಸವಣ್ಣನ ಪ್ರತಿಮೆಗೆ 20 ಕೋಟಿ ರೂ., ರಾಷ್ಟ್ರ ನಾಯಕ ಎಸ್.ನಿಜಲಿಂಗಪ್ಪ ನಿವಾಸ ಸ್ಮಾರವಾಗಿಸಲು 5 ಕೋಟಿ ರೂ. ನೀಡಿದ್ದಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net