ಚಿತ್ರದುರ್ಗದಲ್ಲಿ ನಾಳೆ ಯೋಗ ಜಾಗೃತಿ ಜಾಥಾ

Chitradurga, Yoga, Awareness Jatha,
Published on

ಚಿತ್ರದುರ್ಗ: ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜೂನ್ 21ರಂದು 9 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.

ಡಿಸಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಅಂದು ಬೆಳಗ್ಗೆ 7 ರಿಂದ 7.45 ರವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

ಸಾರ್ವಜನಿಕರು, ಯೋಗಾಸ್ತಕರು, ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಹಾಗೂ ಯೋಗ ಸಂಸ್ಥೆಗಳ ಮುಖ್ಯಸ್ಥರು ಕ್ರಮವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ಎಸ್.ಜಗದೀಶ್ ಮಾತನಾಡಿ, ಅಂದು 900 ಕ್ಕೂ ಹೆಚ್ಚು ಜನರು ಕಾರ‌್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 8 ಯೋಗ ಶಿಕ್ಷಕರು ಪ್ರಾತ್ಯಕ್ಷಿಕೆ ನೀಡಲಿದ್ದಾರೆ ಎಂದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಗರದಲ್ಲಿ ಜೂ.18ರಂದು ಯೋಗ ಜಾಗೃತಿ ಜಾಥಾ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 6.30ಕ್ಕೆ ಜಾಥಾ ಆರಂಭವಾಗುವ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮಾಧ್ಯಮಿಕ ಶಾಲಾ ಆವರಣದಲ್ಲಿ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದರು.

ಆಯುಷ್ ವೈದ್ಯಾಧಿಕಾರಿ ಡಾ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಭಾರತಿ ಆರ್.ಬಣಕಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net