development: ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಸ್ಪರ್ಶ

development: ಹಿರಿಯೂರು ತಾಲೂಕಿನ ಹುಲಿತೊಟ್ಲು ಗ್ರಾಮದ ದಲಿತ ಕಾಲನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಸಚಿವ ಡಿ. ಸುಧಾಕರ್ ಭೂಮಿಪೂಜೆ  ನೇರವೇರಿಸಿದರು.
development: ಹಿರಿಯೂರು ತಾಲೂಕಿನ ಹುಲಿತೊಟ್ಲು ಗ್ರಾಮದ ದಲಿತ ಕಾಲನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಸಚಿವ ಡಿ. ಸುಧಾಕರ್ ಭೂಮಿಪೂಜೆ ನೇರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಡಿ. ಸುಧಾಕರ್ ಹೇಳಿಕೆ
  • ಹುಲಿತೊಟ್ಲು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಭೂಮಿಪೂಜೆ
  • ಲಭ್ಯವಿರುವ ನೀರು ಬಳಸಿಕೊಂಡು ಸಮಗ್ರ ನೀರಾವರಿ ಯೋಜನೆ ಅನುಷ್ಠಾನ
ಹಿರಿಯೂರು: ತಾಲೂಕಿನ ಕಟ್ಟಕಡೆಯ ಹಳ್ಳಿಗೂ ಶುದ್ಧ ಕುಡಿಯುವ ನೀರು, ಸುಸಜ್ಜಿತ ರಸ್ತೆ, ವಿದ್ಯುತ್ ದೀಪ, ಶಿಕ್ಷಣ, ಆರೋಗ್ಯ ಸೇರಿ ಅಭಿವೃದ್ಧಿಯ ಸ್ಪರ್ಶ ನೀಡಲಾಗಿದೆ ಎಂದು ಜಿಲ್ಲಾ ಸಚಿವ ಡಿ. ಸುಧಾಕರ್ ಹೇಳಿದರು.
ತಾಲೂಕಿನ ಹುಲಿತೊಟ್ಲು ಗ್ರಾಮದ ದಲಿತ ಕಾಲನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರದ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಶ್ರಮಿಸಲಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ ಸಾಕಾರ, ವರುಣನ ಕೃಪೆಯಿಂದ ಸತತ 2 ನೇ ಬಾರಿ ವಿವಿ ಸಾಗರ ಭರ್ತಿಯಾಗಿದೆ. ಲಭ್ಯವಿರುವ ನೀರು ಬಳಸಿಕೊಂಡು ಸಮಗ್ರ ನೀರಾವರಿ ಯೋಜನೆ ಅನುಷ್ಠಾನಕ್ಕೆ ಯತ್ನಿಸಲಾಗುವುದು ಎಂದರು.
ಭದ್ರೆ ವಿವಿ ಸಾಗರದ ಒಡಲು ಸೇರಿದ ನಂತರ ತಾಲೂಕಿನಲ್ಲಿ ಕೃಷಿ ನೀರಾವರಿ ವಿಸ್ತರಣೆಯಾಗಿದೆ. ಭವಿಷ್ಯದಲ್ಲಿ ಹಿರಿಯೂರಿನಲ್ಲಿ ಮಲೆನಾಡು ವಾತಾವರಣ ನಿರ್ಮಾಣವಾಗಲಿದೆ. ಸಕ್ಕರೆ ಕಾರ್ಖಾನೆ ಪುನಶ್ಚೇತನ, ಧರ್ಮಪುರ ಏತ ನೀರಾವರಿ 2ನೇ ಹಂತದ ಯೋಜನೆ, ಗಾಯತ್ರಿ ಜಲಾಶಯ, ಜೆ.ಜಿ. ಹಳ್ಳಿ ಹೋಬಳಿಗೆ ಶಾಶ್ವತ ನೀರಾವರಿ ಸೌಲಭ್ಯ, ತೋಟಗಾರಿಕಾ ವಿವಿ ಸ್ಥಾಪನೆಗೆ ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಸರ್ಕಾರದಿಂದ ಹೆಚ್ಚು ಅನುದಾನ ತಂದು ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ತಾಪಂ ಮಾಜಿ ಅಧ್ಯಕ್ಷ ಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ. ರಮೇಶ್, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಮುಖಂಡರಾದ ಕಲ್ಲಹಟ್ಟಿ ಹರೀಶ್, ಜ್ಞಾನೇಶ್, ನಾಗೇಂದ್ರನಾಯ್ಕ, ಟಿ. ಚಂದ್ರಶೇಖರ್, ಜಿ. ದಾದಾಪೀರ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net