ಚಿತ್ರದುರ್ಗ ಶ್ರೀ ಬೃಹನ್ಮಠ ಸಂಯುಕ್ತ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿ ವೇದಿಕೆ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಾ. ಶ್ರೀ ಬಸವಪ್ರಭು ಸ್ವಾಮೀಜಿ ಉದ್ಘಾಟಿಸಿದರು. ಪಿಎಂಜಿ ರಾಜೇಶ್, ನಿಸಾರ್‌ಅಹಮದ್, ಎಸ್. ತಿಪ್ಪೇಸ್ವಾಮಿ, ಎ.ನಾಗರಾಜ್, ಎನ್.ಆರ್. ಸಿದ್ದಪ್ಪ ಇತರರು ಇದ್ದರು.
ಚಿತ್ರದುರ್ಗ: ಹಿಂದೆ ಗುರು, ಮುಂದೆ ಗುರಿ ಇದ್ದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ದಾವಣಗೆರೆ ವಿರಕ್ತಮಠದ ಡಾ. ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.
ಎಸ್‌ಜೆಎಂ ವಿದ್ಯಾಪೀಠ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಬೃಹನ್ಮಠ ಸಂಯುಕ್ತ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿ ವೇದಿಕೆ, ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗುರಿ, ಗುರುವಿಲ್ಲದೆ ಸಾಧನೆ ಅಸಾಧ್ಯ, ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ಉತ್ತಮವಾಗಿ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ವಿದೆ. ಈಗ ಸೋಮಾರಿಗಳಾದರೆ ಮುಂದೆ ಬದುಕಿನಲ್ಲಿ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿ ವಿದ್ಯಾರ್ಥಿಯಲ್ಲೂ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ, ಉನ್ನತ ಸಾಧನೆ ಮಾಡುವ ಸಾಮರ್ಥ್ಯ ವಿರುತ್ತದೆ. ಶೈಕ್ಷಣಿಕ ಸಾಧನೆಗೆ ಪಾಲಕರ ನಿರಂತರ ಸಹಕಾರ, ಮಾರ್ಗದರ್ಶನ ಹಾಗೂ ಪ್ರೋತ್ಸಾಹ ಅಗತ್ಯ ಎಂದರು.
ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕದೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಕಲಿಕೆಗೆ ಪ್ರೋತ್ಸಾಹ ನೀಡಿದರೆ ಉತ್ತಮ -Àಲಿತಾಂಶ ಪಡೆದುಕೊಳ್ಳಬಹುದಾಗಿದೆ ಎಂದು ಶ್ರೀಗಳು ಹೇಳಿದರು.
ನಿವೃತ್ತ ಉಪನ್ಯಾಸಕ ನಿಸಾರ್‌ಅಹಮದ್ ಮಾತನಾಡಿ, ವಿದ್ಯಾರ್ಥಿಗಳು ಗುರಿ ಸಾಽಸಲು ಪಿಯುಸಿ ಅತ್ಯಂತ ಮಹತ್ವದ ಘಟ್ಟ ವಾಗಿದೆ. ಈ ಅವಽಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಹಂತದಲ್ಲಿ ರೂಢಿಸಿಕೊಳ್ಳುವ ಅಧ್ಯಯನದ ಶಿಸ್ತು ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಬುನಾದಿಯಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪಿಎಂಜಿ ರಾಜೇಶ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ತಮ್ಮ ಗುರಿಯತ್ತ ಗಮನ ಹರಿಸಬೇಕು ಎಂದರು.
ಗಾರೆಹಟ್ಟಿ ಗ್ರಾಪಂ ಮಾಜಿ ಸದಸ್ಯ ಎಸ್. ತಿಪ್ಪೇಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಎನ್‌ಜಿಒ ನಿರ್ದೇಶಕ ಎ.ನಾಗರಾ ಜ್, ನಿವೃತ್ತ ಶಿಕ್ಷಕ ಎನ್.ಆರ್. ಸಿದ್ದಪ್ಪ, ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಸುರಕ್ಷಾ ಭೀಮಸಿ ಹಳ್ಳೂರ(ಕಲಾ), ಕೆ. ಸೈಯದ್ ಸಿಮ್ರಾನ್(ವಿಜ್ಞಾನ) ಹಾಗೂ ಟಿ. ರಕ್ಷಿತಾ(ವಾಣಿಜ್ಯ) ಅವರನ್ನು ಸನ್ಮಾ ನಿಸಲಾಯಿತು.
ವಿದ್ಯಾರ್ಥಿ ಸಂಘದ ಪದಾಽಕಾರಿಗಳಾದ ಟಿ. ಭಗವಂತ, ಎಸ್. ಅಶ್ವಿನಿ, ಕೆ.ಬಿ. ವಿನಯ್‌ಕುಮಾರ್, ಪಿ. ಗಾಯತ್ರಿ, ಕೆ. ತೇಜಸ್ ನಾಯ್ಕ ಮತ್ತಿತರರು ಇದ್ದರು. ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ಪ್ರಾರ್ಥಿಸಿ, ಸೌಮ್ಯ ಸ್ವಾಗತಿಸಿದರು.