ಶಿಸ್ತು, ಸಂಸ್ಕಾರಗಳಿಂದ ಉತ್ತಮ ವ್ಯಕ್ತಿತ್ವ ಪ್ರಾಪ್ತಿ awareness

ಭರಮಸಾಗರ ಬಾಪೂಜಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಕೆ. ಸುಧೀನ್ ಕುಮಾರ್ ಮಾತನಾಡಿದರು. ಪಿ. ಪ್ರಸಾದ್, ಎಂ.ಟಿ. ಮಂಜುಳ, ಡಾ.ಎನ್. ಮಮತಾ ಇತರರು ಇದ್ದರು. awareness
ಭರಮಸಾಗರ ಬಾಪೂಜಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಕೆ. ಸುಧೀನ್ ಕುಮಾರ್ ಮಾತನಾಡಿದರು. ಪಿ. ಪ್ರಸಾದ್, ಎಂ.ಟಿ. ಮಂಜುಳ, ಡಾ.ಎನ್. ಮಮತಾ ಇತರರು ಇದ್ದರು. awareness
Published on

ಪ್ರಮುಖ ಮುಖ್ಯಾಂಶಗಳು

  • ಬಾಪೂಜಿ ಕಾಲೇಜಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ
ಭರಮಸಾಗರ: ವಿದ್ಯಾರ್ಥಿಗಳು ಕಾನೂನು ಅರಿವು, ಶಿಸ್ತು, ಸಂಸ್ಕಾರ ಬೆಳೆಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಕೆ. ಸುಧೀನ್ ಕುಮಾರ್ ಹೇಳಿದರು. awareness
ಗ್ರಾಮದ ಬಾಪೂಜಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಆಯೋಜಿಸಿದ್ದ ಮಾದಕ ವಸ್ತು ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲ ವೃತ್ತಿಗಳಿಗೂ ಅದರದ್ದೇ ಆದ ಮಹತ್ವ ಹೊಂದಿವೆ. ಮಾಡುವ ಕೆಲಸದ ಕಾರಣಕ್ಕೆ ಕೀಳಾಗಿ ಕಾಣಬಾರದು. ವಿದ್ಯಾರ್ಥಿ ದೆಸೆಯಲ್ಲೆ ಕಾನೂನಿನ ಅರಿವು ಹೊಂದುವುದು ಅವಶ್ಯ ಎಂದರು. ವಿದ್ಯಾರ್ಥಿಗಳು ಮಾದಕ ವ್ಯಸನ, ದುಶ್ಚಟ, ಕಾನೂನು ಬಾಹಿರ ಚಟುವಟಿಕೆಗಳಿಂದ ದೂರವಿದ್ದು, ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳು ಸಂಭವಿಸಿದಲ್ಲಿ 15100 ಸಹಾಯವಾಣಿಗೆ ಕರೆ ಮಾಡಿ ಸೇವೆ ಪಡೆಯಬಹುದು ಎಂದು ತಿಳಿಸಿದರು. ಭರಮಸಾಗರ ಪೊಲೀಸ್ ನಿರೀಕ್ಷಕ ಪ್ರಸಾದ್ ಪಿ. ಮಾತನಾಡಿ, ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗೂ ಸಾಗಾಣಿಕೆ ಕಾನೂನು ಬಾಹಿರ. ಇಂತಹ ಕೃತ್ಯದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದರು. ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ದ್ವಿಚಕ್ರ ವಾಹನ ಓಡಿಸುವಾಗ ಹೆಲ್ಮೆಟ್ ಧರಿಸಬೇಕು. ಚಾಲನಾ ಪರವಾನಗಿ ಇಲ್ಲದೇ ಯಾವುದೇ ವಾಹನ ಚಲಾಯಿಸುವಂತಿಲ್ಲ ಎಂದು ತಿಳಿಸಿದರು. ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯ ಎಂ.ಟಿ. ಮಂಜುಳ ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಯಾವುದೇ ರೀತಿ ಕಿರುಕುಳ ಅಥವಾ ದೌರ್ಜನ್ಯ ಕಂಡುಬಂದರೆ ಹತ್ತಿರದ ಠಾಣೆಗೆ ದೂರು ನೀಡುವಂತೆ ತಿಳಿಸಿದರು. ಪ್ರಾಚಾರ್ಯೆ ಡಾ.ಎನ್. ಮಮತಾ, ಕಾಲೇಜಿನ ಉಪನ್ಯಾಸಕರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net