ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್
ವ್ಯವಸ್ಥಾಪಕ ನಿರ್ದೇಶಕ
ಚಿತ್ರದುರ್ಗ: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್(ಕೆಎಎಂಸಿಎ)ವ್ಯವಸ್ಥಾಪಕ ನಿರ್ದೇಶಕರಾಗಿ ಬಿ.ಆನಂದ್ ಅವರು ಗುರುವಾರ ಬೆಂಗಳೂರಲ್ಲಿ ಅಽಕಾರ ವಹಿಸಿಕೊಂಡರು.
ಈ ಹಿಂದೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕ್‌ವುಲ್ಲಾ ಷರೀ-ï ಅವರನ್ನು, ಸರ್ಕಾರ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಜಂಟಿನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದೆ.
ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಆನಂದ್ ಅವರನ್ನು ನಿರ್ದೇಶಕರನ್ನಾಗಿ ನೇಮಿಸಿದೆ. ಆನಂದ್ ಅವರು ಮೊದಲಿನ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ.