ಹಿಂದುಳಿದ ವರ್ಗದವರ ಬದುಕಿನಲ್ಲಿ ಜ್ಞಾನದ ದೀಪ ಹಚ್ಚಿದ ಅರಸು
ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯಲ್ಲಿ ಬಿ.ಟಿ. ಕುಮಾರಸ್ವಾಮಿ, ಎಂ.ಕೆ. ತಾಜ್‌ಪೀರ್, ಎಸ್.ಲಕ್ಷಿ÷್ಮÃಕಾಂತ್, ಆರ್.ಎ. ಚೇತನ್‌ರಾಮ್, ಶಿದ್ರಾಮಮಾರಿಹಾಳ, ಪುಷ್ಪಲತಾ ಭಾವಿಮಠ, ಶ್ರೀನಿವಾಸ್ ಮತ್ತಿತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಉಳುವವನೇ ಭೂಮಿ ಒಡೆಯ ಕಾಯ್ದೆಯಿಂದ ಬಹುದೊಡ್ಡ ಕ್ರಾಂತಿ
ಬರವಣಿಗೆಯಿAದ ಜ್ಞಾನ ವಿಸ್ತರಣೆ ಸಾಧ್ಯ
ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸಿದ ಽÃಮಂತ ನಾಯಕ
ಚಿತ್ರದುರ್ಗ:
ಕರ್ನಾಟಕದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಬಾಳಿಗೆ ಶೈಕ್ಷಣಿಕ ದೀಪ ಹಚ್ಚಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಎಂದು ಅಪರ ಜಿಲ್ಲಾಽಕಾರಿ ಬಿ.ಟಿ. ಕುಮಾರಸ್ವಾಮಿ ಬಣ್ಣಿಸಿದರು.
ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಗರದ ತರಾಸು ರಂಗಮAದಿರದಲ್ಲಿ ಗುರುವಾರ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ ೧೧೧ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.
ಹಿಂದುಳಿದ ಹಾಗೂ ಶೋಷಿತ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಾಂದಿ ಹಾಡಿದ ಅವರು ರಾಜ್ಯದಲ್ಲಿ ಹಾಸ್ಟೆಲ್‌ಗಳನ್ನು ಸ್ಥಾಪಿಸ ದಿದ್ದರೆ ಲಕ್ಷಾಂತರ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬೇಕಾಗುತ್ತಿತ್ತು. ಅವರು ಕರ್ನಾಟಕದ ಹಿಂದುಳಿದ ವರ್ಗದವರ ಬದುಕಿನಲ್ಲಿ ಜ್ಞಾನದ ದೀಪ ಹಚ್ಚಿದವರು.
ಇವರ ಆಡಳಿತಾವಽಯಲ್ಲಿ ಜಾರಿಯಾದ ಉಳುವವನೇ ಭೂಮಿ ಒಡೆಯ ಕಾಯ್ದೆ ಬಹುದೊಡ್ಡ ಕ್ರಾಂತಿ ಮಾಡಿದವು. ನಿಜವಾಗಿ ಬೆವರು ಹರಿಸುವ ರೈತನಿಗೆ ಭೂಮಿ ಹಕ್ಕು ದೊರೆಯಿತು ಎಂದು ತಿಳಿಸಿದರು.
ಶಿಕ್ಷಣ ಉದ್ಯೋಗಕ್ಕೆ ಸೀಮಿತವಾಗದೆ ಜ್ಞಾನಾರ್ಜನೆ ಮತ್ತು ಸಂಸ್ಕಾರ ಕಲಿಸುವಂತಿರಬೇಕು. ವಿದ್ಯಾರ್ಥಿಗಳು ಜೀವನಮೌಲ್ಯ ಹಾ ಗೂ ಜವಾಬ್ದಾರಿಗಳನ್ನು ಮರೆಯಬಾರದು. ದಿನಪತ್ರಿಕೆ, ಪುಸ್ತಕಗಳನ್ನು ಓದಿ ಟಿಪ್ಪಣಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು. ಬರವಣಿಗೆಯಿಂದ ಜ್ಞಾನ ವಿಸ್ತರಿಸಿಕೊಳ್ಳಲು ಸಾಧ್ಯವಿದೆ ಎಂದು ಎಡಿಸಿ ಹೇಳಿದರು.
ಅರಸು ಅವರ ತತ್ವ, ಚಿಂತನೆಗಳ ಬಗ್ಗೆ ಎಸ್‌ಜೆಎಂ ಕಾಲೇಜು ಉಪನ್ಯಾಸಕ ಎಸ್. ಲಕ್ಷಿ÷್ಮÃಕಾಂತ್ ಮಾತನಾಡಿ, ಸಮಾನತೆ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಅರಸು ಅವರು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸಾಮಾಜಿಕ ನ್ಯಾಯದ ಶಿಲ್ಪಿಯಾಗಿ ಶಾಶ್ವತವಾಗಿ ನೆಲೆಸಿದ್ದಾರೆ.
ಬಸವಣ್ಣನವರ ಸಮಾನತೆ, ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಗೌತಮ ಬುದ್ಧರ ಚಿಂತನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಆಡಳಿತದಲ್ಲಿ ಅನುಷ್ಠಾನಗೊಳಿಸಿದರು. ಕ್ರಾಂತಿಕಾರಿ ಕಾನೂನುಗಳನ್ನು ಜಾರಿಗೊಳಿಸಿ ಶೋಷಿತ ಸಮುದಾಯಗಳಿಗೆ ಧ್ವನಿಯಾದರು ಎಂದು ತಿಳಿಸಿದರು.
ಶಿಕ್ಷಣ ತಜ್ಞ ಆರ್.ಎ. ಚೇತನ್‌ರಾಮ್ ಅವರು ಮೌಲ್ಯಾಧಾರಿತ ಶಿಕ್ಷಣ ಮತ್ತು ಸ್ವ ಅಭಿವೃದ್ಧಿ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗ ದರ್ಶನ ನೀಡಿದರು.
ಕುಡಾ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಽಕಾರಿ ಪುಷ್ಪಲತಾ ಭಾವಿಮಠ, ಲೇಖಕ ಆನಂದ್‌ಕುಮಾರ್, ವಕೀಲ ಪ್ರತಾಪ್ ಜೋಗಿ, ವಿವಿಧ ಸಮುದಾಯಗಳ ಮುಖಂಡರು ಇದ್ದರು.
ಪ್ರತಿಭಾ ಪುರಸ್ಕಾರ
ಅರಸು ಅವರ ಜಯಂತ್ಯುತ್ಸವ ಅಂಗವಾಗಿ ಆಯೋಜಿಸಿದ್ದ ಪ್ರಬಂಧ, ಚರ್ಚೆ ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಬಿಸಿಎಂ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.