ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ

ಜಿ¯್ಲÁಽಕಾರಿ ಟಿ. ವೆಂಕಟೇಶ್
ಜಿ¯್ಲÁಽಕಾರಿ ಟಿ. ವೆಂಕಟೇಶ್
Published on

ಪ್ರಮುಖ ಮುಖ್ಯಾಂಶಗಳು

  • ವಾಟರ್ ಮಾದರಿ ಪರೀಕ್ಷೆ ನಂತರವೇ ಸರಬರಾಜು ಮಾಡಿ
  • ಡಿಸಿ ಟಿ. ವೆಂಕಟೇಶ್ ಸೂಚನೆ
  • ನಗರ ಮತ್ತು ಗ್ರಾಮೀಣ ಪ್ರದೇಶ
ಚಿತ್ರದುರ್ಗ : ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಜಿ¯್ಲÁ ಮತ್ತು ತಾಲೂಕು ಮಟ್ಟದ ಅಽಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿ¯್ಲÁಽಕಾರಿ ಟಿ. ವೆಂಕಟೇಶ್ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಜಿ¯್ಲÁ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆಯಲ್ಲಿ ಮಾತನಾಡಿ, ನಗರ, ಪಟ್ಟಣ, ಗ್ರಾಮ ಒಳಗೊಂಡು ಯಾವುದೇ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಸ್ಪಂದಿಸಬೇಕು. ಖಾಸಗಿ ಕೊಳವೆಬಾವಿಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಸುವ ಮುನ್ನ ಕಡ್ಡಾಯವಾಗಿ ನೀರಿನ ಮಾದರಿ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ನೀರಿನ ಟ್ಯಾಂಕ್, ಟ್ಯಾಂಕರ್‌ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಸ ಬೇಕು. ಬೇಸಿಗೆಯಲ್ಲಿ ವಸತಿನಿಲಯ, ಕಾಲೇಜುಗಳಲ್ಲಿ ನೀರಿನ ಅಭಾವ ಉಂಟಾಗದAತೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಬಹುದಾದ ಹಳ್ಳಿ, ಪ್ರದೇಶ ಗುರುತಿಸಿ ಪ್ರತಿ ವಾರ ಜಿ¯್ಲÁಡಳಿತಕ್ಕೆ ವರದಿ ಸಲ್ಲಿಸಬೇಕು. ಸರಬರಾಜಿನಲ್ಲಿ ಕರ್ತವ್ಯ ಲೋಪ ಎಸಗುವ ಅಽಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಚರಂಡಿ ಸ್ವಚ್ಛತೆಗೆ ಸೂಚನೆ:
ಚರಂಡಿಗಳು ಬ್ಲಾಕ್ ಆಗುತ್ತಿರುವ ಕುರಿತು ದೂರುಗಳು ಬಂದಿವೆ. ತಕ್ಷಣ ಸ್ವಚ್ಛಗೊಳಿಸಬೇಕು. ಈ ಬಗ್ಗೆ ಅಽಕಾರಿಗಳು ಪ್ರತಿ ವಾರ ಮೇಲ್ವಿಚಾರಣೆ ನಡೆಸಬೇಕು ಎಂದರು.
ಜಿಪA ಸಿಇಒ ಡಾ. ಆಕಾಶ್ ಮಾತನಾಡಿ, ಜಿ¯್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ತಹಸೀಲ್ದಾರ್, ತಾಪಂ ಇಒ, ಇಂಜಿನಿಯರ್‌ಗಳು ಜಂಟಿಯಾಗಿ ಸಮೀಕ್ಷೆ ನಡೆಸಿ, ವೈe್ಞÁನಿಕ ವರದಿ ಸಲ್ಲಿಸುವಂತೆ ನಿರ್ದೇಶಿಸಿದರು.
ಮುಂದಿನ ಏಪ್ರಿಲï, ಮೇ ತಿಂಗಳಲ್ಲಿ ಯಾವ್ಯಾವ ಗ್ರಾಮಗಳಲ್ಲಿ ಅತಿ ಹೆಚ್ಚು ನೀರಿನ ಅಭಾವ ಸೃಷ್ಟಿಯಾಗಲಿದೆ ಎಂಬುದನ್ನು ಕಂಡುಕೊAಡು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಜನಸಂಖ್ಯೆ, ಲಭ್ಯವಿರುವ ಕೊಳವೆಬಾವಿಗಳ ಸ್ಥಿತಿಗತಿ ಬಗ್ಗೆ ತಕ್ಷಣ ವರದಿ ನೀಡಬೇಕು. ಪರ್ಯಾಯ ವ್ಯವಸ್ಥೆಯೊಂದಿಗೆ ನೀರು ಪೂರೈಸುವುದು ಅಽಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸಿ ಕಾಂತರಾಜ್, ಜಿ¯್ಲÁ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲï, ನಗರಸಭೆ ಪೌರಾಯುಕ್ತೆ ಲಕ್ಷಿ÷್ಮÃ ಇನ್ನಿತರ ಅಽಕಾರಿಗಳು ಇದ್ದರು.
ಹಟ್ಟಿ ಜಾತ್ರೆಯಲ್ಲಿ ಸಮಸ್ಯೆಯಾಗಬಾರದು
ನಾಯಕನಹಟ್ಟಿ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಸೇರುವುದರಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರಬರಾಜಿಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಡಿಸಿ ಸೂಚಿಸಿದರು.
ಹೆಚ್ಚುವರಿ ಕಡಲೆ ಖರೀದಿ ಕೇಂದ್ರ ಸ್ಥಾಪನೆ
ಜಿ¯್ಲÉಯಲ್ಲಿ ಈ ಬಾರಿ ಕಡಲೆ ಇಳುವರಿ ಉತ್ತಮವಾಗಿದೆ. ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟಕ್ಕೆ ಅನುಕೂ ಲವಾಗುವಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಟಿ. ವೆಂಕಟೇಶ್ ಕೃಷಿ ಅಽಕಾರಿಗಳಿಗೆ ಸೂಚಿಸಿದರು.
ಜಿ¯್ಲÉಯಲ್ಲಿ ಒಟ್ಟು ೩೭ ಸಾವಿರ ಹೆಕ್ಟೇರ್‌ನಲ್ಲಿ ಕಡಲೆ ಬಿತ್ತನೆಯಾಗಿದೆ. ಸುಮಾರು ೪೦ ಸಾವಿರ ಟನ್ ಕಡಲೆ ಇಳುವರಿ ನಿರೀಕ್ಷಿಸಲಾಗಿದೆ.
ರಾಜ್ಯಾದ್ಯಂತ ಬೆಂಬಲ ಬೆಲೆ ಯೋಜನೆಯಡಿ ೧ ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅನುಮತಿ ನೀಡಲಾಗಿದೆ. ಜಿ¯್ಲÉಗೆ ಯಾವುದೇ ಗುರಿ ನಿಗದಿ ಮಾಡಿಲ್ಲ. ಆದರೂ, ಹೆಚ್ಚುವರಿ ಕೇಂದ್ರ ತೆರೆಯಲು ಅಗತ್ಯ ಕ್ರಮ ವಹಿಸುವುದಾಗಿ ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಸಭೆಗೆ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net