ಹೊಸದುರ್ಗದಲ್ಲಿ ಶನಿವಾರ ತಾಲೂಕು ಬಿಜೆಪಿ ಘಟಕ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಭೆಯನ್ನು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಉದ್ಘಾಟಿಸಿದರು. ಬುರುಡೆಕಟ್ಟೆ ರಾಜೇಶ, ಕೆ.ಎಸ್. ಕಲ್ಮಠ, ಗೂಳಿಹಟ್ಟಿ ಜಗದೀಶ್, ಜಗದೀಶ ರಾಮಯ್ಯ, ಅಣ್ಣಪ್ಪ ಸ್ವಾಮಿ, ನಾಗರಾಜ್ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪಕ್ಷದ ಬಿಎಲ್‌ಎಗಳಿಗೆ ಎಸ್. ಲಿಂಗಮೂರ್ತಿ ಸಲಹೆ
ಬಿಜೆಪಿಯಿಂದ ಎಸ್‌ಐಆರ್ ವಿಶೇಷ ಸಭೆ
ಹೊಸದುರ್ಗ: ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಪಕ್ಷ ನಿಯೋಜಿಸಿರುವ ಬಿಎಲ್ಎಗಳು ದಕ್ಷತೆಯಿಂದ ಕೆಲಸ ಮಾಡಿ ಅರ್ಹ ಮತದಾರರಿಗೆ ಅನುಕೂಲ ಕಲ್ಪಿಸಬೇಕು ಎಂದು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಹೇಳಿದರು.
ಪಟ್ಟಣದಲ್ಲಿ ಶನಿವಾರ ತಾಲೂಕು ಬಿಜೆಪಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ನಡೆಯುವ ಎಸ್‌ಐಆರ್‌ನಲ್ಲಿ ಬಿಜೆಪಿ ಸಕ್ರಿಯವಾಗಿ ತೊಡಗಿಸಿಕೊಂಡು ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಸೇರಿಸುವುದುನ್ನು ಖಚಿತಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಸ್ಥಳಾಂತರ ಕುರಿತ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.
ಸಮಗ್ರ ಮ್ಯಾಪಿಂಗ್ ನಡೆಸಬೇಕು. ಅರ್ಹರು ಪಟ್ಟಿಯಿಂದ ಹೊರಗುಳಿಯಬಾರದು. ದೋಷಗಳು ಕಂಡು ಬಂದಲ್ಲಿ ಅಂತಹ ಹೆಸರುಗಳನ್ನು ಬಿಡಬೇಕು. ಆಯೋಗವು ತಾಂತ್ರಿಕ ವ್ಯವಸ್ಥೆ ಮೂಲಕ ಮತದಾರರ ಮಾಹಿತಿ ಪರಿಶೀಲಿಸುತ್ತಿದೆ ಎಂದರು.
ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಎಸ್‌ಐಆರ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿವೆ. ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ ಗೌರವಿಸುವ ರಾಷ್ಟ್ರೀಯ ಪಕ್ಷವಾಗಿದೆ. ಪ್ರತಿಯೊಬ್ಬರೂ ಪಕ್ಷದ ಆದೇಶ ಪಾಲಿಸಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದರು.
ಎಂಎಲ್‌ಸಿ ಕೆ.ಎಸ್. ನವೀನ್ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಆಯೋಗದ ಸೂಚನೆಯಂತೆ ಮತದಾರರ ಮಾಹಿತಿ ಪರಿಶೀಲಿಸುವ ಹಾಗೂ ನವೀಕರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಯಾವುದೇ ಆತಂಕ ಬೇಡ. ಪರಿಕ್ಷರಣೆ ವೇಳೆ ಅಗತ್ಯ ದಾಖಲೆ ಒದಗಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಎಸ್. ಕಲ್ಮಠ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್, ಜಿಲ್ಲಾ ಕಾರ್ಯದರ್ಶಿ ಜಗದೀಶ ರಾಮಯ್ಯ, ತಾಲೂಕು ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮಾಜಿ ಅಧ್ಯಕ್ಷ ಡಿ.ಟಿ. ವಟ್ಟಿ ಲಕ್ಷ್ಮಣ್, ನಾಗರಾಜ್ ಇತರರಿದ್ದರು.