ಸಂವಿಧಾನದ ಆಶಯದಂತೆ ಬಿಜೆಪಿಯಿಂದ ಸಾಮಾಜಿಕ ನ್ಯಾಯಕ್ಕೆ ಒತ್ತು

ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಎಂಎಲ್‌ಸಿ ಕೆ.ಎಸ್. ನವೀನ್, ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಕೆ.ಟಿ. ಕುಮಾರಸ್ವಾಮಿ, ಪರಶುರಾಂ, ರೇಖಾ, ಎಂ. ಮುರುಳಿ ಮತ್ತಿತರರು ಇದ್ದರು.
ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಎಂಎಲ್‌ಸಿ ಕೆ.ಎಸ್. ನವೀನ್, ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಕೆ.ಟಿ. ಕುಮಾರಸ್ವಾಮಿ, ಪರಶುರಾಂ, ರೇಖಾ, ಎಂ. ಮುರುಳಿ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂ ಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆ
  • ಸಾಮಾಜಿಕ ನ್ಯಾಯಕ್ಕೆ ಒತ್ತು
  • ಸಮುದಾಯಗಳಲ್ಲಿ ಜಾಗೃತಿ
ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಅವರ ಜನ್ಮ ದಿನಾಚರಣÉಗೆ ಅರ್ಥ ಬರುತ್ತದೆ ಎಂದು ಎಂಎಲ್‌ಸಿ ಕೆ.ಎಸ್. ನವೀನ್ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಎಸ್‌ಸಿ ಮೋರ್ಚಾ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂ ಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಸಂ ವಿಧಾನದ ಆಶಯಗಳಂತೆ ಅಽಕಾರ ನಡೆಸುತ್ತಿದ್ದಾರೆ. ನಮ್ಮ ಸಂಘಟನೆಯ ಎಲ್ಲ ಬೂತ್, ಘಟಕಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸದಸ್ಯರು ಇರುವಂತೆ ನೋಡಿಕೊಳ್ಳಲಾಗಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ವಿ-Àಲವಾಗಿದೆ. ದೇಶದ ಎಲ್ಲ ಕಡೆ ನಕಲಿ ಗಾಂಽಗಳ ಹೆಸರಿಡಲಾಗಿದೆ ಹೊ ರತು ಎಲ್ಲೂ ಅಂಬೇಡ್ಕರ್ ಅವರ ಹೆಸರಿಟ್ಟಿಲ್ಲ. ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಇಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದೆ. ಈ ಕುರಿತು ಬಿಜೆಪಿ ಕಾರ್ಯಕರ್ತರು ಸಮುದಾಯಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್‌ಕುಮಾರ್ ಮಾತನಾಡಿ, ಬಿಜೆಪಿ ಸಂವಿಧಾನ ಅಶಯದಡಿ ಸಂಘಟಿಸಿದ ಪಕ್ಷವಾಗಿದೆ. ಪಕ್ಷ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಆದರೆ, ಕಾಂಗ್ರೆಸ್ ಒಳ ಮೀಸಲು ನೀಡ ದೆ ಮೀನಮೇಷ ಎಣಿಸುತ್ತಿದೆ. ಕಾಂಗ್ರೆಸ್ ದಲಿತರನ್ನು ಬೆಳಕಿನಿಂದ ಕತ್ತಲಿಗೆ ಕರೆದುಕೊಂಡು ಹೋಗುತ್ತದೆ ಎಂದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್ ಮಾತನಾಡಿ, ಮುಂದಿನ ೧ ತಿಂಗಳ ಕಾಲ ಜಿಲ್ಲೆಯ ಎಲ್ಲ ಬೂತ್ ಮಟ್ಟದಲ್ಲಿ ಅಂಬೇಡ್ಕರ್ ಜನ್ಮದಿನ ಆಚರಿಸಲಾಗುವುದು ಎಂದರು.
ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಮ್ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಜಿಲ್ಲಾ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಎ. ಮುರಳಿ, ಮಾಧುರಿ ಗೀರಿಶ್, ನಾಗರಾಜ್, ಲೋಕೇಶ್, ಸಿದ್ದಾಪುರದ ಸುರೇಶ್, ಸಂಪತ್‌ಕುಮಾರ್, ನಾಗರಾಜ್‌ಬೇದ್ರೆ, ನವೀನ್ ಚಾಲುಕ್ಯ, ದಗ್ಗೆ ಶಿವಪ್ರಕಾಶ್, ಕಲ್ಲೇಶಯ್ಯ, ಮಲ್ಲಿಕಾರ್ಜನ್, ಛಲವಾದಿ ತಿಪ್ಪೇಸ್ವಾಮಿ, ಕಲ್ಲೇಶ, ಉಮಾ, ರೇಖಾ, ಬಸಮ್ಮ, ಸುರೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net