ಹವಾಮಾನ ಸವಾಲು ಎದುರಿಸಲು ಸಮನ್ವಯತೆ ಕಾರ್ಯನಿರ್ವಹಣೆ ಅಗತ್ಯ
ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಡಾ.ಎಸ್. ಆಕಾಶ್, ಸಿ.ಎಸ್.ಗಾಯತ್ರಿ, ಜಯಲಕ್ಷಿ÷್ಮÃ, ಡಾ. ಪವಿತ್ರಾ ಪಿ. ನಾಯಕ್, ತೇಜುಕುಮಾರ್ ಇತರರು ಇದ್ದರು.
ಚಿತ್ರದುರ್ಗ: ಹವಾಮಾನ ಬದಲಾವಣೆಯಿಂದ ಜಿಲ್ಲೆ ಎದುರಿಸುತ್ತಿರುವ ಜಲ ಸಂಪನ್ಮೂಲಗಳ ಕೊರತೆ, ತಾಪಮಾನ ಏರಿಕೆ ಸೇರಿ ವಿವಿಧ ಪರಿಸರ ಸಂಬAಽ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ಡಾ.ಎಸ್. ಆಕಾಶ್ ವಿವಿಧ ಇಲಾಖೆಗಳ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಅರಣ್ಯ, ಪರಿಸರ ಮತ್ತು ಜೀವಿಶಾಸö ಇಲಾಖೆ ಅಽÃನದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾ ಗೂ ರಾಜ್ಯವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಗುರುವಾರ ಜಿಪಂನಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮುಂಬರುವ ದಿನಗಳಲ್ಲಿ ಹವಾಮಾನ ಬದಲಾವಣೆಯ ತೀವ್ರತೆ ತಗ್ಗಿಸಲು ಕೈಗೊಳ್ಳಬೇಕಾದ ಸಿದ್ಧತೆಗಳು ಮತ್ತು ಕಾರ್ಯತಂತ್ರ ಗಳ ಬಗ್ಗೆ ಅಽಕಾರಿಗಳಿಗೆ ಮಾರ್ಗದರ್ಶನ ನೀಡಿದ ಅವರು, ಪರಿಸರ ಸಂರಕ್ಷಣೆಗೆ ಎಲ್ಲ ಇಲಾಖೆಗಳ ಸಾಮೂಹಿಕ ಪ್ರಯತ್ನ ಅಗತ್ಯ ಎಂದರು.
ಜಿಪA ಮುಖ್ಯಯೋಜನಾಽಕಾರಿ ಸಿ.ಎಸ್. ಗಾಯತ್ರಿ ಅವರು ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಅಽಕಾರಿಗಳು ಈ ತರಬೇ ತಿಯ ಸಂಪೂರ್ಣ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಸಿದ್ಧಪಡಿಸಿ ಎಂಪ್ರಿ ಕ್ರಿಯಾ ಯೋಜನೆಗೆ ೨೦೨೪ರಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ರಾಜ್ಯದ ವಿವಿಧ ಇಲಾಖೆಗಳು ೨೦೨೫-೨೦೩೦ರ ಅವಽಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳು ಹಾಗೂ ಗುರಿಗಳನ್ನು ನಿಗದಿಪಡಿಸಿಕೊಂಡಿವೆ.
ಕಳೆದ ಸಾಲಿನಲ್ಲಿ ರಾಜ್ಯದ ೨೨ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದಿದ್ದ ಈ ತರಬೇತಿ ಕಾರ್ಯಕ್ರಮವನ್ನು, ಪ್ರಸಕ್ತ ಸಾಲಿನಲ್ಲಿ ರಾಜ್ಯ ದ ಎಲ್ಲ ೩೧ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ ಎಂದು ಎಂಪ್ರಿ ಸಂಸ್ಥೆ ಅಽಕಾರಿಗಳು ತಿಳಿಸಿದರು.
ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ. ಪವಿತ್ರಾ ಪಿ. ನಾಯಕ್, ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಕಾರ್ಯನೀತಿ, ವಿವಿಧ ಇಲಾಖೆಗಳ ಪಾತ್ರ, ಅಲ್ಪಾವಽಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಹಾಗೂ ಜಿಲ್ಲಾ ಮಟ್ಟದ ದತ್ತಾಂಶಗಳ ಕುರಿತು ಉಪನ್ಯಾಸ ನೀಡಿದರು.
ಬೆಂಗಳೂರಿನ ಎಸಿಐಡಬ್ಲ್ಯುಆರ್‌ಎಂ ಸಂಸ್ಥೆಯ ಸಂಶೋಧನಾ ವಿಜ್ಞಾನಿ ತೇಜುಕುಮಾರ್, ಜಲ ಸಂಪನ್ಮೂಲ ವಲಯಕ್ಕೆ ಸಂಬA ಽಸಿದ ಹವಾಮಾನ ಕ್ರಿಯಾ ಯೋಜನೆ ಹಾಗೂ ಅದರ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಪಂ ಯೋಜನಾ ನಿರ್ದೇಶಕಿ ಜಯಲಕ್ಷಿ÷್ಮÃ, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಕೆ. ಹರೀಶ್, ಜಿಪಂ ಎನ್‌ಆರ್‌ಡಿಎಂಎಸ್ ಪ್ರಭಾರ ಅಽಕಾರಿ ಆನಂದ್, ಎಂಪ್ರಿ ಸಂಸ್ಥೆಯ ತರಬೇತಿ ಅಸೋಸಿಯೇಟ್ ರುಚಿತಾ ಹಾಗೂ ತರಬೇತಿ ಸಹಾಯಕ ಎನ್. ರಾಘವೇಂದ್ರ ಮತ್ತಿತರರು ಇದ್ದರು.