ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಹಾಕರ್ ಜೋನ್‌ಗೆ ಡಿಸಿ ತಾಕೀತು

ಚಿತ್ರದುರ್ಗದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಕೌಶಲಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಟಿ. ವೆಂಕಟೇಶ್, ರೇಷ್ಮಾ ಹಾನಗಲ್, ಸಣ್ಣಕ್ಕಿ ಮಾರುತಿ, ವಿಜಯಕುಮಾರ್, ವೇಮಣ್ಣ,ದಿವಾಕರ್, ರೇಖಾ, ರವಿಚಂದ್ರ ಇತರರು ಇದ್ದರು.
ಚಿತ್ರದುರ್ಗದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಕೌಶಲಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿ ಟಿ. ವೆಂಕಟೇಶ್, ರೇಷ್ಮಾ ಹಾನಗಲ್, ಸಣ್ಣಕ್ಕಿ ಮಾರುತಿ, ವಿಜಯಕುಮಾರ್, ವೇಮಣ್ಣ,ದಿವಾಕರ್, ರೇಖಾ, ರವಿಚಂದ್ರ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಿಎಂ ಸ್ವನಿಽ ಯೋಜನೆಯಡಿ ಸಾಲ ಸೌಲಭ್ಯಕ್ಕೆ ನಿರ್ದೇಶನ
  • ಜಿಲ್ಲಾ ಕೌಶಲ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ
  • ಅಪ್ರೆಂಟಿಶಿಪ್‌
ಚಿತ್ರದುರ್ಗ: ನಗರ, ಪಟ್ಟಣ ಪ್ರದೇಶಗಳ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಹಾಕರ್ ಜೋನ್ ಗುರುತಿಸಿ, ಪಿಎಂ ಸ್ವನಿಽ ಯೋಜನೆಯಡಿ ಸಾಲ ಸೌಲಭ್ಯ ಒದಗಿಸುವಂತೆ ಜಿಲ್ಲಾಽಕಾರಿ ಟಿ. ವೆಂಕಟೇಶ್ ಅಽಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಕೌಶಲ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರ ಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಽ ಯೋಜನೆ ಕುರಿತ ಅರಿವಿಗೆ ಬೀದಿ ನಾಟಕ, ಕರಪತ್ರ ವಿತರಣೆ ಮತ್ತು ಬ್ಯಾನರ್‌ಗಳ ಮೂಲಕ ವ್ಯಾಪಕ ಪ್ರಚಾರ ನೀಡ ಬೇಕು. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಪಿಎಂ ಸ್ವನಿಽ ಯೋಜನೆ ಸೌಲಭ್ಯ ದೊರೆಯುವಂತೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಡಿಸಿ ಅಸಮಾಧಾನ: ಜಿಲ್ಲೆಯ ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉದ್ಯೋಗ ದೊರಕಿಸಿಕೊಡುವುದು ಸಂಸ್ಥೆಗಳ ಮುಖ್ಯ ಜವಾಬ್ದಾರಿಯಾಗಬೇಕು. ಜಿಲ್ಲೆಯ ಪ್ರತಿ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಂದ ಪ್ರತಿವರ್ಷ ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಅವರಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂಬ ನಿಖರ ಮಾಹಿತಿ ಇರಬೇಕು.
ಎಸ್‌ಎಸ್‌ಎಲ್‌ಸಿ ಮುಗಿಸಿ ತಕ್ಷಣದ ಉದ್ಯೋಗಕ್ಕಾಗಿ ಐಟಿಐ ಸೇರುವ ಬಡ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ, ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಇಲಾಖೆ ಆದ್ಯತೆಯಾಗಬೇಕು ಎಂದರು.
ಜಿಲ್ಲೆಯ ಐಟಿಐ ಕಾಲೇಜುಗಳಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳ ಅಪ್ರೆಂಟಿಶಿಪ್ ತರಬೇತಿ ಪ್ರಗತಿ ಕುಂಠಿತವಾಗಿರುವುದಕ್ಕೆ ಡಿಸಿ ಅಸಮಾಧಾನ ವ್ಯಕ್ತಪಡಿಸಿದರು.
ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಐಟಿಐ ಕಾಲೇಜುಗಳಿಂದ ವಾರ್ಷಿಕ ೮೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದು, ಇವರಲ್ಲಿ ೧೮೧ ವಿದ್ಯಾರ್ಥಿಗಳು ಅಪ್ರೆಂಟಿಶಿಪ್‌ಗೆ ನೋಂದಾಯಿಸಿರುವುದು ವಿಷಾದನೀಯ. ಉತ್ತೀರ್ಣರಾದವರಲ್ಲಿ ಕನಿಷ್ಠ ಶೇ.೫೦ ವಿದ್ಯಾರ್ಥಿಗಳು ಅಪ್ರೆಂಟಿಶಿಪ್‌ಗೆ ಸೇರಿಸುವ ಗುರಿ ಇರಬೇಕು.
ಚಿತ್ರದುರ್ಗ ಹಿಂದುಳಿದ ಜಿಲ್ಲೆಯಾಗಿರುವುದರಿಂದ ಇಲ್ಲಿನ ಯುವಜನರಿಗೆ ಹೆಚ್ಚಿನ ತಾಂತ್ರಿಕ ತರಬೇತಿ ಮತ್ತು ಉದ್ಯೋಗದ ನೆರ ವು ನೀಡುವಲ್ಲಿ ಐಟಿಐ ಕಾಲೇಜುಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಜಿಲ್ಲಾ ಕೌಶಲ ಮಿಷನ್‌ಗೆ ಪೂರಕ ವಾಗಿ ವಿವಿಧ ೮ ಉಪ ಸಮಿತಿಗಳನ್ನು ಸÊಜಿಸಲಾಗಿದ್ದು, ಉಪಸಮಿತಿಗಳ ಅಧ್ಯಕ್ಷರು, ಸದಸ್ಯರು ಕಾಲಕಾಲಕ್ಕೆ ಸಭೆ ನಡೆಸ ಬೇಕು. ಮುಂದಿನ ೧೦ ದಿನದೊಳಗೆ ಎಲ್ಲ ಉಪ ಸಮಿತಿಗಳು ಸಭೆಗಳ ನಡಾವಳಿಗಳನ್ನು ಸಲ್ಲಿಸಬೇಕೆಂದು ಡಿಸಿ ನಿರ್ದೇಶಿಸಿದರು.
ಜಿಲ್ಲಾ ಕೌಶಲಾಭಿವೃದ್ಧಿ ಅಽಕಾರಿ ಸಣ್ಣಕ್ಕಿ ಮಾರುತಿ ಮಾತನಾಡಿ, ಯುವನಿಽ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ೫,೫೯೭ -Àಲಾನುಭವಿಗಳು ೨,೧೧೮ -Àಲಾನುಭವಿಗಳ ಪರಿಶೀಲನೆ ಪೂರ್ಣಗೊಂಡಿದೆ. ಯುವನಿಽ -Àಲಾನುಭವಿಗಳನ್ನು ತರಬೇತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಎಸ್‌ಎಸ್‌ಒ ವೇಮಣ್ಣ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಽ ಕಾರಿ ದಿವಾಕರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಽಕಾರಿ ರೇಖಾ, ಜಿಲ್ಲಾ ಉದ್ಯೋಗಾಽಕಾರಿ ರವಿಚಂದ್ರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net