ಗುಣಮಟ್ಟದ ಶಿಕ್ಷಣ, ಆವರಣದಲ್ಲಿ ಸ್ವಚ್ಛತೆಗೆ ಜಿಲ್ಲಾಧಿಕಾರಿ ಸೂಚನೆ Visit

ಹಿರಿಯೂರು ತಾಲೂಕಿನ ದೇವರಕೊಟ್ಟ ಏಕಲವ್ಯ ಮಾದರಿ ವಸತಿ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಭೇಟಿ ನೀಡಿ, ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಪರಿಶೀಲಿಸಿದರು. Visit
ಹಿರಿಯೂರು ತಾಲೂಕಿನ ದೇವರಕೊಟ್ಟ ಏಕಲವ್ಯ ಮಾದರಿ ವಸತಿ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಭೇಟಿ ನೀಡಿ, ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಪರಿಶೀಲಿಸಿದರು. Visit
Published on

ಪ್ರಮುಖ ಮುಖ್ಯಾಂಶಗಳು

  • ದೇವರಕೊಟ್ಟ ಏಕಲವ್ಯ ವಸತಿ ಶಾಲೆಗೆ ಟಿ. ವೆಂಕಟೇಶ್ ಭೇಟಿ
  • ಶೈಕ್ಷಣಿಕ ಪ್ರಗತಿ, ಮೂಲ ಸೌಕರ್ಯ ಪರಿಶೀಲನೆ
ಹಿರಿಯೂರು: ತಾಲೂಕಿನ ದೇವರಕೊಟ್ಟ ಏಕಲವ್ಯ ಮಾದರಿ ವಸತಿ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಪರಿಶೀಲಿಸಿದರು. Visit
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಲು ವಿಶೇಷ ಗಮನ ಹರಿಸಬೇಕು. ಶಾಲಾ ಆವರಣದಲ್ಲಿ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗಸೂಚಿ ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಶಾಲಾ ವಸತಿ ಗೃಹಗಳಲ್ಲಿಯೇ ವಾಸ್ತವ್ಯ ಹೂಡಬೇಕು. ಶಾಲೆಯ ಆವರಣದಲ್ಲಿ ಏನಾದರೂ ಸಣ್ಣಪುಟ್ಟ ದುರಸ್ತಿ ಕಾಮಗಾರಿಗಳಿದ್ದರೆ, ಪೂರ್ವಾನುಮತಿ ಪಡೆದು ತಕ್ಷಣ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ವಿದ್ಯಾರ್ಥಿಗಳಿಗೆ ಮೆನು ಪ್ರಕಾರ ಊಟ, ತಿಂಡಿ ನೀಡಬೇಕು. ಕಡ್ಡಾಯವಾಗಿ ಶುದ್ಧೀಕರಿಸಿದ ನೀರನ್ನೇ ಕುಡಿಯಲು ಕೊಡಬೇಕು. ಎಲ್ಲ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ಮಕ್ಕಳ ಆರೋಗ್ಯದ ವೈಯಕ್ತಿಕ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೃದಯ ಸಂಬಂಧಿ ಕಾಯಿಲೆ ಸೇರಿ ಗಂಭೀರ ಆರೋಗ್ಯ ಸಮಸ್ಯೆ ಇರುವ ಮಕ್ಕಳ ಮೇಲೆ ನಿರಂತರ ನಿಗಾ ವಹಿಸಬೇಕು. ಶಾಲೆಯ ನರ್ಸ್ ಈ ಬಗ್ಗೆ ಫಾಲೋ-ಅಪ್ ಮಾಡಬೇಕು ಎಂದು ತಿಳಿಸಿದರು.
ಪ್ರತಿ ತಿಂಗಳು ಪಾಲಕರು ಮತ್ತು ಶಿಕ್ಷಕರ ಸಭೆ ಆಯೋಜಿಸಿ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಪಾಲಕರಿಗೆ ಮಾಹಿತಿ ನೀಡಬೇಕು. ಶಾಲೆ 36ಎಕರೆ ಪ್ರದೇಶದಲ್ಲಿದೆ. ಆವರಣದಲ್ಲಿ ಬೆಳೆದಿರುವ ಗಿಡಗಂಟಿಗಳು ಹಾಗೂ ಹುಲ್ಲನ್ನು ತೆರವುಗೊಳಿಸಿ ಆಟದ ಮೈದಾನ ಹಾಗೂ ಶಾಲಾ ಆವರಣವನ್ನು ಸದಾ ಸುಸ್ಥಿತಿಯಲ್ಲಿಡಬೇಕು ಎಂದು ನಿರ್ದೇಶನ ನೀಡಿದರು. ದೇವರಕೊಟ್ಟದ ಏಕಲವ್ಯ ಮಾದರಿ ವಸತಿ ಶಾಲೆಯು ಸಿಬಿಎಸ್‌ಇ ಪಠ್ಯಕ್ರಮ ಹೊಂದಿದ್ದು, 6ನೇ ತರಗತಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಗುಣಮಟ್ಟದ ಶಿಕ್ಷಣದ ನೀಡುತ್ತಿರುವುದರಿಂದ ಶಾಲೆಗೆ ಬಹಳ ಬೇಡಿಕೆಯಿದೆ. ಮೊದಲ ಸುತ್ತಿನಲ್ಲೇ 6ನೇ ತರಗತಿಯ ಎಲ್ಲ ಸೀಟುಗಳು ಭರ್ತಿಯಾಗಿವೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್. ದಿವಾಕರ್ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.
ಎಸ್‌ಐಆರ್ ಪರಿಶೀಲನೆ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026ರ ಸಂಬಂಧ ಹಿರಿಯೂರು ತಾಲೂಕು ಕಚೇರಿಗೆ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಎಂ. ಸಿದ್ದೇಶ್, ಉಪ ತಹಸೀಲ್ದಾರ್ ತಿಪ್ಪೇಸ್ವಾಮಿ, ಮಯವರ್ಮ, ಕಾವ್ಯಾ, ವಾಣಿ, ಮಂಜುನಾಥ್ ಇದ್ದರು.
ಏಕಲವ್ಯ ಮಾದರಿ ವಸತಿ ಶಾಲೆ ಪ್ರಾಚಾರ್ಯ ಧನರಾಮ್ ಚೌಧರಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net