ಚಿತ್ರದುರ್ಗ: ಜೀವನ ಶೈಲಿಯಿಂದ ತುತ್ತಾಗಬಹುದಾದ ರೋಗಗಳಿಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಯುವಜನರಿಗೆ ಡಿಎಚ್‌ಒ ಡಾ.ಜಿ.ಪಿ. ರೇಣುಪ್ರಸಾದ್ ಸಲಹೆ ನೀಡಿದರು.
ಚಿತ್ರದುರ್ಗ ತಾಲೂಕು ಜಿಆರ್‌ಹಳ್ಳಿ ಜ್ಞಾನ ಗಂಗೋತ್ರಿ ಕ್ಯಾಂಪಸ್ ಚಿತ್ರದುರ್ಗ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಯಲ್ಲಿ ಪ್ರಥಮ, ದ್ವಿತೀಯ ಹಂತದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಗುರುವಾರದಿಂದ ಆಯೋಜಿಸಿರುವ ಎರಡು ದಿನಗಳ ಸಮಗ್ರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.
ಯುವಜನರಲ್ಲಿ ಜೀವನಶೈಲಿ ಸಂಬAಽತ ರೋಗಗಳು ಹೆಚ್ಚಾಗುತ್ತಿವೆ. ಇದರಿಂದ ಅವರ ಅಧ್ಯಯನ, ಉದ್ಯೋಗಕ್ಕೆ ತೊಡಕಾಗು ತ್ತಿದೆ. ಆದ್ದರಿಂದ ಆರಂಭಿಕ ಹಂತದಲ್ಲೇ ರೋಗಗಳ ಪತ್ತೆಗೆ ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಆ ರೋಗ್ಯದೆಡೆ ಹೆಚ್ಚಿನ ಗಮನ ಹರಿಸಬೇಕು ಎಂದರು.
ಶಿಬಿರ ಉದ್ಘಾಟಿಸಿದ ವೈದ್ಯಕೀಯ ಕಾಲೇಜು ಡೀನ್ ಡಾ.ಬಿ.ವೈ. ಯುವರಾಜ್ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯ ಕಾಳಜಿ ಸಂಸ್ಥೆಯ ಜವಾಬ್ದಾರಿಯಾಗಿದೆ. ಈ ಶಿಬಿರ ಭವಿಷ್ಯದ ವೈದ್ಯರ ಕಾರ್ಯಕ್ಷಮತೆ ಹೆಚ್ಚಿಸಲು ಪೂರಕವಾಗಿದೆ ಎಂದರು.
ಚಿತ್ರದುರ್ಗ ಜಿಲ್ಲಾಸ್ಪತ್ರೆ ಜಿಲ್ಲಾ ಶಸöಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ಮಾತನಾಡಿ, ಶೈಕ್ಷಣಿಕ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯವಿದೆ ಎಂದರು.
೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಯಿತು. ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಎಲ್.ಎಚ್. ಅಶ್ವಿನಿ ಇತರರು ಇದ್ದರು.