ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ದುರ್ಗ ಪ್ರಥಮ

ರಾಜ್ಯಮಟ್ಟದ ಪ್ರಾಚ್ಯಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾ ರ್ಥಿಗಳಾದ ತನುಜಾ ಮತ್ತು ವಸುಂಧರ ಹಾಗೂ ಮಾರ್ಗದರ್ಶಿ ಶಿಕ್ಷಕ ಮಲ್ಲಿಕಾರ್ಜುನಸ್ವಾಮಿ ಅವರನ್ನು ಸೋಮವಾರ ಚಿತ್ರದು ರ್ಗದ ಡಯಟ್‌ನಲ್ಲಿ ಸನ್ಮಾನಿಸಲಾಯಿತು. ಎಂ. ನಾಸೀರುದ್ದೀನ್,ಎಸ್.ನಾಗಭೂಷಣ್ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ
  • ಡಯಟ್‌ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ
  • ಮೈಸೂರು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ
ಚಿತ್ರದುರ್ಗ:ಶಿಕ್ಷಣ ಇಲಾಖೆ, ಮೈಸೂರು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಈಚೆಗೆ ಗದಗಿನ ಮಹಾತ್ಮ ಗಾಂ ಽ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾ.ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಾಚ್ಯಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಚಿತ್ರದುರ್ಗ ತಾಲೂಕು ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆ ೧೦ನೇ ತರಗತಿ ವಿದ್ಯಾರ್ಥಿಗಳಾದ ತನುಜಾ, ವಸುಂಧರ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಿ ಶಿಕ್ಷಕ ಟಿ.ಎಂ.ಮಲ್ಲಿಕಾರ್ಜುನಸ್ವಾಮಿ ಅವರನ್ನು ಸೋಮವಾರ ಚಿತ್ರದುರ್ಗದ ಡಯಟ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ಡಯಟ್ ಪ್ರಾಚಾರ್ಯ ಎಂ.ನಾಸಿ ರುದ್ದೀನ್, ಪಠ್ಯ ಬೋಧನೆಯೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿದೆ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ಉಪ ಪ್ರಾಚಾರ್ಯ ಎಸ್. ನಾಗಭೂಷಣ್, ಹಿರಿಯ ಉಪನ್ಯಾಸಕ ತಿಪ್ಪೇಸ್ವಾಮಿ, ಉಪನ್ಯಾಸಕರಾದ ಎಸ್. ಬಸವರಾಜು, ಪದ್ಮಾ, ರಾಮಣ್ಣ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ, ಮಾರ್ಗದರ್ಶಿ ಶಿಕ್ಷಕ ಟಿ.ಎಂ. ಮಲ್ಲಿಕಾರ್ಜುನಸ್ವಾಮಿ, ಹಾಲೇಶ್, ನಿಜಗುಣಮೂರ್ತಿ, ವರಲಕ್ಷಿ÷್ಮÃ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net