ಗರಿಷ್ಠ ಸಂಖ್ಯೆಯಲ್ಲಿ ಬೆಳೆ ವಿಮೆ ನೋಂದಣಿಗೆ ನಿಗಾ ವಹಿಸಿ

 ಬೆಳೆ ವಿಮೆ ನೋಂದಣಿಗೆ ಸಂಬಂಽಸಿದಂತೆ ಚಿತ್ರದುರ್ಗ ಡಿಸಿಸಿ ಬ್ಯಾಂಕಿನಲ್ಲಿ ಗುರುವಾರ ಬ್ಯಾಂಕಿನ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಅವರು ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕ ಬಿ.ಜಿ.ಗೋವಿಂದಪ್ಪ ಮತ್ತಿತರರು ಇದ್ದರು.
ಬೆಳೆ ವಿಮೆ ನೋಂದಣಿಗೆ ಸಂಬಂಽಸಿದಂತೆ ಚಿತ್ರದುರ್ಗ ಡಿಸಿಸಿ ಬ್ಯಾಂಕಿನಲ್ಲಿ ಗುರುವಾರ ಬ್ಯಾಂಕಿನ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ಅವರು ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕ ಬಿ.ಜಿ.ಗೋವಿಂದಪ್ಪ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಕಾರಿ ಅಽಕಾರಿಗಳಿಗೆ ರಘುಮೂರ್ತಿ ನಿರ್ದೇಶನ
  • ಸಂಘಗಳಿಗೆ ನೋಡೆಲ್ ಅಽಕಾರಿಗಳ ನೇಮಕ
  • ಬೆಳೆ ವಿಮೆಗೆ ನೋಂದಣಿ
ಚಿತ್ರದುರ್ಗ: ಇನ್ನು ಎಂಟು ದಿನದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆಗೆ ನೋಂದಾಯಿಸಲು ನಿಗಾ ವಹಿಸಬೇಕು ಎಂದು ಚಳ್ಳಕೆರೆ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಟಿ. ರಘುಮೂರ್ತಿ ಬ್ಯಾಂಕ್ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ಗುರುವಾರ ಬೆಳೆವಿಮೆ ನೋಂದಣಿ ಪ್ರಗತಿ ಪರಿಶೀಲಿಸಿದ ಅವರು, ಜಿಲ್ಲೆಯಲ್ಲಿರುವ ಒಟ್ಟು ೩,೦೨,೫೦೫ರೈತರ ಪೈಕಿ ಈಗಾಗಲೇ ೯೭,೪೩೪ ಮಂದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಹಿತ ನಾನಾ ಬ್ಯಾಂಕ್‌ಗಳು, ಗ್ರಾಮ ಒನ್ ಮೊದಲಾದೆಡೆ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೃಷಿ ಸಾಲ ಪಡೆದ ರೈತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗೆ ನೋಂದಾಯಿಸಬೇಕು. ಈ ನಿಟ್ಟಿನಲ್ಲಿ ಅಽಕಾರಿ, ಸಿಬ್ಬಂದಿ ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ತಾಕೀತು ಮಾಡಿದರು.
ಡಿಸಿಸಿ ಬ್ಯಾಂಕ್ ಎಂಡಿ ಇಲ್ಲಾಸ್‌ಉಲ್ಲಾ ಷರೀಪ್ ಅವರು ಮಾತನಾಡಿ, ಬ್ಯಾಂಕಿನ ೨೨ ಶಾಖೆಗಳು, ೧೬೦ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿವೆ. ಬೆಳೆ ವಿಮೆ ನೋಂದಣಿಗೆ ಜು.೩೧ಕೊನೇ ದಿನವಾಗಿದೆ. ಉಳಿದ ಅವಽಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳವ ನಿಟ್ಟಿನಲ್ಲಿ ನಿಗಾ ವಹಿಸಲು ನೋಡೆಲ್ ಅಽಕಾರಿಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ. ಮಂಜುನಾಥ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ. ಸವಿತಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net