ಚಿತ್ರದುರ್ಗದಲ್ಲಿ ಗುರುವಾರ ಆಯೋಜಿಸಿದ್ದ ಎಸ್‌ಐಆರ್ ಕುರಿತ ರಾಜಕೀಯ ಪಕ್ಷಗಳ ಪ್ರತಿನಿಽಗಳ ಸಭೆಯಲ್ಲಿ ಡಿಸಿ ಟಿ. ವೆಂಕಟೇಶ್, ಬಿ.ಟಿ. ಕುಮಾರಸ್ವಾಮಿ, ಎಂ.ಕೆ. ತಾಜ್‌ಪೀರ್, ಬೀಬೀ ಫಾತಿಮಾ, ಡಿ.ಎನ್. ಮೈಲಾರಪ್ಪ ಇತರರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲೆಯ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಗೊಂದಲಗಳಿಲ್ಲ
ರಾಜಕೀಯ ಪಕ್ಷಗಳ ಪ್ರತಿನಿಽಗಳ ಸಭೆಯಲ್ಲಿ ಡಿಸಿ ಹೇಳಿಕೆ
ರಾಜಕೀಯ ಪಕ್ಷಗಳ ಪ್ರತಿ ನಿಽಗಳು
ಚಿತ್ರದುರ್ಗ: ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ರಾಜಕೀಯ ಪಕ್ಷ ಗಳ ಪ್ರತಿ ನಿಽಗಳು ಹಾಗೂ ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಽಕಾರಿ, ಡಿಸಿ ಟಿ. ವೆಂಕಟೇಶ್ ಮನವಿ ಮಾಡಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಸಂಬAಧ ಮತದಾರರ ಗಣತಿ ನ ಮೂನೆಗಳ ವಿತರಿಸಿರುವ ಕುರಿತಂತೆ ರಾಜಕೀಯ ಪಕ್ಷಗಳ ಪ್ರತಿನಿಽಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನಮೂನೆಗಳ ವಿತ ರಣೆ ಕಾರ್ಯದಲ್ಲಿ ಶೇ.೯೮ರಷ್ಟು ಪ್ರಗತಿ ಸಾಽಸಲಾಗಿದೆ. ಬಾಕಿ ಉಳಿದಿರುವ ಶೇ.೨ ಪ್ರಕರಣಗಳಲ್ಲಿ ಮರಣ ಹೊಂದಿದವರು,
ಸ್ಥಳಾಂತರ ಗೊಂಡಿರುವ ಹಾಗೂ ಮನೆಗೆ ಬೀಗ ಹಾಕಿ ಬೇರೆಡೆ ವಾಸಿಸುತ್ತಿರುವವರ ವಿವರಗಳಿದ್ದು, ಇವುಗಳನ್ನು ಸರಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಜು.೮ರ ಅಂಕಿಅAಶಗಳ ಪ್ರಕಾರ ಜಿಲ್ಲೆಯ ೧೪,೪೦,೫೩೪ ಮತದಾರರ ಪೈಕಿ ಈಗಾಗಲೇ ೧೪,೦೪,೨೧೯ ಮತದಾರರ (ಶೇ. ೯೭.೪೮)ಮ್ಯಾಪಿಂಗ್ ಆಗಿದೆ. ೩೬,೩೧೫ ಮತದಾರರ ಮ್ಯಾಪಿಂಗ್ ಬಾಕಿ ಉಳಿದಿದೆ. ಇವರ ವಿಳಾಸ ಪತ್ತೆಯಾಗುತ್ತಿಲ್ಲ. ಇವರು ಯಾರು? ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಪಟ್ಟಿಯಿಂದ ತೆಗೆದುಹಾಕಲು ಅಥವಾ ಸರಿಪಡಿಸಲು ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟರು ನಮಗೆ ಮಾಹಿತಿ ನೀಡಿ ಸಹಕರಿಸಬೇಕು.
ಮೃತಪಟ್ಟವರ ಡೆತ್ ಸರ್ಟಿಫಿಕೇಟ್ ಲಭ್ಯವಿದ್ದರೆ ಅಂಥವರ ಹೆಸರನ್ನು ಪಟ್ಟಿಯಿಂದ ತೆಗೆಯಲು ಸುಲಭವಾಗುತ್ತದೆ ಎಂದರು.
ವಿಶೇಷವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರನ್ನು ಗುರುತಿಸುವಲ್ಲಿ ಸ್ಥಳೀಯ ವಾರ್ಡ್ ಸದಸ್ಯರು, ಮಾಜಿ ಕೌನ್ಸಿಲರ್‌ಗಳು ಹಾಗೂ ಗ್ರಾಪಂ ಮಾಜಿ ಸದಸ್ಯರ ಪಾತ್ರ ಹಿರಿದಾಗಿದೆ.
ಪಕ್ಷಾತೀತವಾಗಿ ಇವರೆಲ್ಲರಿಗೂ ಸ್ಥಳೀಯ ಮತದಾರರ ಬಗ್ಗೆ ನಿಖರ ಮಾಹಿತಿ ಇರುತ್ತದೆ. ಆದ್ದರಿಂದ ತಕ್ಷಣವೇ ತಹಸೀಲ್ದಾರ್, ಇಒ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಽಕಾರಿಗಳ ನೇತೃತ್ವದಲ್ಲಿ ಸಭೆ ಕರೆದು ಮಹಜರು ಪ್ರಕ್ರಿಯೆ ಮೂಲಕ ನಿಖರ ಮಾಹಿತಿ ಪಡೆಯುವಂತೆ ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಎಲ್ಲ ರಾಜಕೀಯ ಪಕ್ಷಗಳು ಕೈ ಜೋಡಿಸಬೇಕೆಂದು ಕೋರಿದರು.
ಜಿಲ್ಲೆಯಲ್ಲಿ ಎಸ್‌ಐಆರ್ ಯಶಸ್ವಿಯಾಗಿ ಸಾಗುತ್ತಿದೆ. ನಮೂನೆಗಳ ವಿತರಣೆಯಲ್ಲಿ ರಾಜ್ಯದಲ್ಲೇ ನಮ್ಮ ಜಿಲ್ಲೆ ಮುಂಚೂಣಿಯಲ್ಲಿದೆ. ಗೊಂದಲ, ವಿವಾದಗಳಿಗೆ ಆಸ್ಪದ ನೀಡದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಗಣತಿ ನಮೂನೆಗಳನ್ನು ಭರ್ತಿ ಮಾಡುವಾಗ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲಗಳ ತಪ್ಪಿಸಲು ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ.
ನಮೂನೆಗಳ ಮೊದಲ ಭಾಗ ಹಾಗೂ ೨ನೇ ಭಾಗಗಳನ್ನು ಭರ್ತಿ ಮಾಡುವಾಗ ಆಗುವ ಸಾಮಾನ್ಯ ತಪ್ಪುಗಳನ್ನು ತಪ್ಪಿಸಲು ಬಿ ಎಲ್‌ಒ, ಬಿಎಲ್‌ಎಗಳಿಗೆ ವಿಶೇಷ ತರಬೇತಿ ನೀಡಲಾಗಿದೆ. ಎಸ್‌ಐಆರ್‌ನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಿತ್ಯ ಸಂಜೆ ಎಲ್ಲ ತಾಲೂಕುಗಳ ಅಽಕಾರಿಗಳೊಂದಿಗೆ ವಿಡಿಯೋ ಕಾನರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಸಿ ಹೇಳಿದರು.
ಅಪರ ಜಿಲ್ಲಾಽಕಾರಿ ಬಿ.ಟಿ. ಕುಮಾರಸ್ವಾಮಿ, ಚುನಾವಣಾ ತಹಸೀಲ್ದಾರ್ ಬೀಬೀ -Áತಿಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ. ತಾಜ್‌ಪೀರ್, ಡಿ.ಎನ್. ಮೈಲಾರಪ್ಪ, ಸಂಪತ್‌ಕುಮಾರ್, ಬಿಜೆಪಿಯ ಟಿ. ಯಶವಂತಕುಮಾರ್, ಬಿಎಸ್‌ಪಿಯ ಪ್ರಕಾಶ್, ನಿಂಗರಾಜ್ ಇದ್ದರು.