ಬೆಳೆ ವಿಮೆ ಪರಿಹಾರ ಬಿಡುಗಡೆ ವಿಳಂಬ ಖಂಡಿಸಿ ರೈತರ ಪ್ರತಿಭಟನೆ

 ಶೀಘ್ರ ಬೆಳೆ ವಿಮೆ ಪರಿಹಾರ ಮೊತ್ತ ಪಾವತಿಸುವಂತೆ ಒತ್ತಾಯಿಸಿ ರೈತರು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟಿಸಿ ಅಪರ ಜಿಲ್ಲಾಽಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಕೆ.ಪಿ. ಭೂತಯ್ಯ, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್,ಡಿಡಿ ಶಿವಕುಮಾರ್, ಬೆಸ್ಕಾಂ ಅಽಕಾರಿಗಳು ಇದ್ದರು.
ಶೀಘ್ರ ಬೆಳೆ ವಿಮೆ ಪರಿಹಾರ ಮೊತ್ತ ಪಾವತಿಸುವಂತೆ ಒತ್ತಾಯಿಸಿ ರೈತರು ಚಿತ್ರದುರ್ಗದಲ್ಲಿ ಗುರುವಾರ ಪ್ರತಿಭಟಿಸಿ ಅಪರ ಜಿಲ್ಲಾಽಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಕೆ.ಪಿ. ಭೂತಯ್ಯ, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್,ಡಿಡಿ ಶಿವಕುಮಾರ್, ಬೆಸ್ಕಾಂ ಅಽಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಮಾ ಕಂಪನಿಗಳು, ಜಿಲ್ಲಾಡಳಿತದ ವಿರುದ್ಧ ಆಕ್ರೋಶ|
  • ಭದ್ರಾ ಮೇಲ್ದಂಡೆ ಅನುದಾನಕ್ಕೆ ಆಗ್ರಹ
  • ಚಳ್ಳಕೆರೆ ತಾಲೂಕು ಕಚೇರಿ
ಚಿತ್ರದುರ್ಗ : ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವ ವಿಮಾ ಕಂಪನಿಗಳು ಹಾಗೂ ಜಿಲ್ಲಾಡಳಿತದ ನಿರ್ಲಕ್ಷ÷್ಯ ಖಂಡಿಸಿ ರಾಜ್ಯರೈತ ಸಂಘದ ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿAದ ಮೆರವಣಿಗೆ ಮೂಲಕ ಆಗಮಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ರೈತರನ್ನು ವೀರ ವನಿತೆ ಒನಕೆ ಓಬವ್ವ ವÊತ್ತದಲ್ಲೇ ಪೊಲೀಸರು ತಡೆದು ನಿಲ್ಲಿಸಿದರು.
ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ, ಕಳೆದ ವರ್ಷ ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಅನೇಕ ಬೆಳೆಗಳು ನಾಶವಾಗಿವೆ. ಚಳ್ಳಕೆರೆ ತಾಲೂಕಿನಲ್ಲಿ ಶೇಂಗಾ ಹಾನಿಯಿಂದ ರೈತರು ಕೈ ಸುಟ್ಟುಕೊಂಡು ಕÊಷಿ ಸಾಲ ತೀರಿಸಲಾಗದೆ ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ. 
ಇಂಥ ಸಂಕಷ್ಟದ ಪರಿಸ್ಥಿತಿಯಲ್ಲೂ ವಿಮಾ ಕಂಪನಿಗಳು ರೈತರಿಗೆ ಸ್ಪಂದಿಸುತ್ತಿಲ್ಲ. ಚಳ್ಳಕೆರೆ ತಾಲೂಕು ಕಚೇರಿ ಎದುರು ಧರಣಿ ನಡೆಸಿದಾಗ ಅಽಕಾರಿಗಳು ವಿಮೆ ಹಣ ಪಾವತಿಸುವ ಭರವಸೆ ನೀಡಿದ್ದರು. ಆದರೆ ಈಡೇರಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ೫೩೦೦ ಕೋಟಿ ರೂ. ಅನುದಾನ ಈವರೆಗೂ ಬಿಡುಗಡೆ ಆಗಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವಕ್ಕೆ ಆಗಮಿಸುತ್ತಿರುವ ಕೇಂದ್ರ ಗÊಹ ಸಚಿವ ಅಮಿತ್‌ ಶಾ ಅವರು ಕೇಂದ್ರ ಸರ್ಕಾರದ ಘೋಷಣೆ ಈಡೇರಿಸಲು ಮುಂದಾಗಬೇಕೆAದು ಆಗ್ರಹಿಸಿದರು.
ಸಮರ್ಪಕ ವಿದ್ಯುತ್ ಪೂರೈಕೆ
ಚಿತ್ರದುರ್ಗ ತಾಲೂಕಿನ ಹಂಪಯ್ಯನಮಾಳಿಗೆ,ಬೊಮ್ಮನಹಳ್ಳಿ, ಬಚ್ಚಬೋರನಹಟ್ಟಿ, ಸಾಸಲಹಟ್ಟಿ, ಕಲ್ಲೇನಹಳ್ಳಿ ಮೊದಲಾದ ೧೦ಕ್ಕೂ ಹೆಚ್ಚು ಗ್ರಾಮಗಳಿಗೆ ಗೋನೂರು ಫೀಡರ್‌ನಿಂದ ಸಮರ್ಪಕ ವಿದ್ಯುತ್ ಪೂರೈಸುವಂತೆ ಬೆಸ್ಕಾಂ ಅಽಕಾರಿಗಳನ್ನೂ ಈ ಸಂದರ್ಭ ಒತ್ತಾಯಿಸಿದರು. 
ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ೭ ತಾಸು ವಿದ್ಯುತ್ ಸರಬರಾಜು ಮಾಡಬೇಕೆಂದು ಆದೇಶಿಸಿದೆ. ಆದರೆ, ಈ ಫೀಡರ್‌ನಿಂದ ೪-೫ ಗಂಟೆಗಳ ಕಾಲವೂ ಗುಣಮಟ್ಟದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ೧೦-೧೨ ಬಾರಿ ಟ್ರಿಪ್ ಆಗುತ್ತದೆ. ಇದನ್ನು ಅಽಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ಬೆಳೆಗಳು ಒಣಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಘಟಕ ಅಳವಡಿಸುತ್ತಿದ್ದು, ಸಿವಿಲ್ ಕಾಮಗಾರಿ ವೆಚ್ಚವನ್ನು ರೈತರೇ ಭರಿಸುವಂತಾಗಿದೆ. ಆದ್ದರಿಂದ ಸಂಬAಽಸಿದವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಅಽಕಾರಿಗಳನ್ನು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ತಾಲೂಕು ಅಧ್ಯಕ್ಷ ಟಿ. ಹಂಪಣ್ಣ, ಕೆ.ಸಿ. ಹೊರಕೇರಪ್ಪ, ಹಿರಿಯೂರು ತಾಲೂಕು ಅಧ್ಯಕ್ಷ ಬಿ.ಒ. ಶಿವಕುಮಾರ್, ಆರ್. ಚೇತನ್‌ಯಳನಾಡು, ಬಸ್ತಿಹಳ್ಳಿ ಜಿ. ಸುರೇಶ್‌ಬಾಬು, ಬಿ.ಪಿ. ಉಮಾಪತಿ, ಓಂಕಾರಪ್ಪ, ಅಜೇಯ್, ರುದ್ರಪ್ಪ, ಎನ್.ಆರ್. ರಂಗಸ್ವಾಮಿ, ಟಿ. ಮುನಿಸ್ವಾಮಿ, ಕಾಂತರಾಜ್, ಆರ್. ಶಂಕರಮೂರ್ತಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net