ಬೆಳೆ ವಿಮೆ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಬೆಳೆವಿಮೆ ಪರಿಹಾರ ಮೊತ್ತ ಪಾವತಿಗೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿ ಎಡಿಸಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಕೆ.ಪಿ. ಭೂತಯ್ಯ, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇತರರು ಇದ್ದರು.
ಬೆಳೆವಿಮೆ ಪರಿಹಾರ ಮೊತ್ತ ಪಾವತಿಗೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿ ಎಡಿಸಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ಕೆ.ಪಿ. ಭೂತಯ್ಯ, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ೭ರಂದು ಡಿಸಿ ಕಚೇರಿ ಮುತ್ತಿಗೆ, ರಾ.ಹೆ. ಬಂದ್ ಎಚ್ಚರಿಕೆ
  • ತಾರತಮ್ಯ ನೀತಿ ವಿರುದ್ಧ ಆಕ್ರೋಶ
  • ಪ್ರಧಾನ ಮಂತ್ರಿ -Àಸಲ್‌ಭೀಮಾ ಯೋಜನೆ
ಚಿತ್ರದುರ್ಗ: ಬೆಳೆ ವಿಮೆ ಪಾವತಿಸಿರುವ ರೈತರಿಗೆ ವಿಮೆ ಪರಿಹಾರ ಮೊತ್ತ ಬಿಡುಗಡೆ ಆಗ್ರಹಿಸಿ ರಾಜ್ಯ ರೈತ ಸಂಘದ ನೇತೃತ್ವದ ಲ್ಲಿ ರೈತರು ಸೋಮವಾರ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಎಡಿಸಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಇನ್ನು ಎರಡು ದಿನಗಳ ಒಳಗೆ ವಿಮೆ ಹಣ ಬಿಡುಗಡೆಯಾಗದಿದ್ದರೆ ಮೇ ೭ರಂದು ಜಿಲ್ಲಾಽಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಎಚ್ಚರಿಕೆ ನೀಡಿದರು.
ಕೇಂದ್ರ, ರಾಜ್ಯ ಸರ್ಕಾರಗಳು ರೈತ ವಿರೋಽ ನೀತಿ ಅನುಸರಿಸುತ್ತಿವೆ. ಬೆಳೆವಿಮೆ ಪಾವತಿಸುವಂತೆ ಚಳ್ಳಕೆರೆ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದಾಗ ಜಂಟಿ ಕೃಷಿ ನಿರ್ದೇಶಕರು ಹಾಗೂ ತಹಸೀಲ್ದಾರ್ ಅವರು ಸ್ಥಳಕ್ಕಾಗಮಿಸಿ ವಿಮೆ ಹಣ ಪಾವತಿಸು ವುದಾಗಿ ಹೇಳಿದ್ದರು. ಆದರೆ, ಈವರೆಗೂ ಬೆಳೆವಿಮೆ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿಲ್ಲ ಎಂದು ಭೂತಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಓರಿಯಂಟಲ್ ವಿಮಾ ಕಂಪನಿ ಚಳ್ಳಕೆರೆ ತಾಲೂಕು ಹಿರೇಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ೮೦ ರೈತರಿಗೆ ಬೆಳೆ ವಿಮೆ ಹಣ ಪಾವತಿಸಿದೆ. ಆದರೆ, ಜಿಲ್ಲೆಯ ಎಲ್ಲ ರೈತರಿಗೆ ಯಾಕೆ ಪಾವತಿಸಿಲ್ಲ? ಇಂಥÀ ತಾರತಮ್ಯವೆಸಗುವ ಈ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ರೈತ ಮುಖಂಡ ಕೆ.ಸಿ. ಹೊರಕೇರಪ್ಪ ಮಾತನಾಡಿ, ಪ್ರಧಾನ ಮಂತ್ರಿ -Àಸಲ್‌ಭೀಮಾ ಯೋಜನೆಯಡಿ ಅನುಕೂಲವಾಗುತ್ತ ದೆಂದು ನಂಬಿ ಬೆಳೆ ವಿಮೆ ಕಟ್ಟಿರುವ ರೈತರಿಗೆ ವಿಮೆ ಕಂಪನಿಗಳು ಪರಿಹಾರ ಕೊಡದೆ ಮೋಸ ಮಾಡುತ್ತಿವೆ. ಸರ್ಕಾರವೇ ನೇ ರವಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು. ಹಣ ಪಾವತಿಸದಿದ್ದರೆ ಜಿಲ್ಲಾಽಕಾರಿ ಕಚೇರಿಗೆ ಬೀಗ ಹಾಕಿ, ರಾಷ್ಟಿçÃಯ ಹೆ ದ್ದಾರಿ ಬಂದ್ ಮಾಡಲಾಗುವುದು ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಜಿ. ಸುರೇಶ್ ಬಾಬು, ಟಿ. ಹಂಪಣ್ಣ, ಆರ್. ಚೇತನ್‌ಯಳನಾಡು, ಎಂ.ಎಸ್. ಪ್ರಭು, ಬಿ.ಒ. ಶಿವಕುಮಾರ್, ಎಂ. ಶಶಿಕಲಾ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net