೯ರಂದು ಬೆಳಗಾವಿಯಲ್ಲಿ ರೈತರ ಪ್ರತಿಭಟನೆ

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್
  • ರೈತರ ಬೃಹತ್ ಪ್ರತಿಭಟನೆ
  • ತುಂಗಭದ್ರಾ ಡ್ಯಾಂ
ಚಿತ್ರದುರ್ಗ: ರಾಜ್ಯ ಸರ್ಕಾರದ ರೈತ ವಿರೋಽ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಡಿ.೯ರಂದು ರೈತರ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ೭೪ ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದ್ದರೂ ೫ಲಕ್ಷ ಮೆಟ್ರಿಕ್ ಟನ್ ಖರೀದಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ ಎಂದು ಕಿಡಿಕಾರಿದರು.
ತುಂಗಭದ್ರಾ ಡ್ಯಾಂ ಎರಡು ಬಾರಿ ಭರ್ತಿಯಾಗಿದೆ. ಆದರೂ ೨ನೇ ಬೆಳೆಗೆ ನೀರು ಬಿಡುತ್ತಿಲ್ಲ. ಗೇಟ್ ರಿಪೇರಿ ನೆಪದಲ್ಲಿ ಸರ್ಕಾರ ವಿಳ ಂಬ ಮಾಡುತ್ತಿದೆ. ಗೇಟ್ ರಿಪೇರಿಯ ಹಿಂದಿನ ೧೨ ಕೋಟಿ ರೂ. ಕೂಡ ಬಾಕಿ ಇದೆ. ಆದ್ದರಿಂದ ರೈತರು ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟಿಸಲಿದ್ದಾರೆ. ಪ್ರತಿ ಎಕರೆಗೆ ೨೫ ಸಾವಿರ ರೂ.ಪರಿಹಾರ ಕೊಡಬೇಕು ಎಂದರು.
ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆ ಶೇ.೮೦ ಹಾಳಾಗಿದ್ದರೂ ಪರಿಹಾರ ಕೊಟ್ಟಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರೈತರ ಸಮಸ್ಯೆಗಳನ್ನು ಚರ್ಚಿಸದೆ ಸಿಎಂ, ಡಿಸಿಎಂ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಯಾ ಪೈಸೆ ಅಭಿವೃದ್ಧಿ ಆಗಿಲ್ಲ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಬಿಜೆಪಿ ರಾಷ್ಟಿçÃಯ ಅಧ್ಯಕ್ಷರು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಂತೆ ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳು ತ್ತಾರೆ ಎಂದರು.
ಎAಎಲ್‌ಸಿ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಸಂಪತ್‌ಕುಮಾರ್, ಮಲ್ಲಿಕಾರ್ಜನ್, ವೆಂಕಟೇಶ್ ಯಾದವ್, ನಾಗರಾಜ್‌ಬೇದ್ರೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net