ಬೇಡಿಕೆ ಈಡೇರದಿದ್ದರೆ ಆಮರಣಾಂತ ಉಪವಾಸ

 ಈಡಿಗ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆ ಚಿತ್ರದುರ್ಗಕ್ಕೆ ಶುಕ್ರವಾರ ಆಗಮಿಸಿದ ಸಂದರ್ಭದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಶ್ರೀಗಳು, ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಮೂರ್ತಿ ಸ್ವಾಮೀಜಿ, ಶಾಸಕ ಗುರುಮೆ ಸುರೇಶ್‌ಶೆಟ್ಟಿ, ಸಿ.ತಿಪ್ಪೇಸ್ವಾಮಿ ಇದ್ದರು.
ಈಡಿಗ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆ ಚಿತ್ರದುರ್ಗಕ್ಕೆ ಶುಕ್ರವಾರ ಆಗಮಿಸಿದ ಸಂದರ್ಭದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಶ್ರೀಗಳು, ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಮೂರ್ತಿ ಸ್ವಾಮೀಜಿ, ಶಾಸಕ ಗುರುಮೆ ಸುರೇಶ್‌ಶೆಟ್ಟಿ, ಸಿ.ತಿಪ್ಪೇಸ್ವಾಮಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಕ್ಕೆ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ
  • ದುರ್ಗಕ್ಕೆ ಆಗಮಿಸಿದ ಶ್ರೀಗಳ ನೇತೃತ್ವದ ಪಾದಯಾತ್ರೆ
  • ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ
ಚಿತ್ರದುರ್ಗ: ಪರಿಶಿಷ್ಟ ಜಾತಿ ಮೀಸಲು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣ ಗುರುಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಶಕ್ತಿ ಪೀಠದಿಂದ ಜ.೬ರಂದು ಆರಂಭವಾಗಿರುವ ಪಾದಯಾತ್ರೆ ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿತು.
ಪೊಲೀಸ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಶ್ರೀಗಳು, ದಿನವೊಂದಕ್ಕೆ ೨೦ ಕಿ.ಮೀ. ನಂ ತೆ ೪೧ದಿನಗಳ ಕಾಲ ಕ್ರಮಿಸಿ ಪಾದಯಾತ್ರೆ ಬೆಂಗಳೂರು ತಲುಪಲಿದೆ. ಈಡಿಗ ಬಿಲ್ಲವ, ನಾಮಧಾರಿ, ಽÃವರ ಇತರ ೨೬ ಪಂಗಡಗಳಿರುವ ಸಮುದಾಯದ ಬೇಡಿಕೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದು ಪಾದಯಾತ್ರೆ ಉದ್ದೇಶ ಎಂದರು.
ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ೫೦೦ ಕೋಟಿ ರೂ.ಅನುದಾನ, ಕುಲಕಸುಬು ಕಳೆದುಕೊಂಡ ಕಲ್ಯಾಣ ಕ ರ್ನಾಟಕ ಭಾಗದ ಸಂತ್ರಸ್ತ ಈಡಿಗರ ಪ್ರತಿ ಕುಟುಂಬಕ್ಕೆ ೫ ಎಕರೆ ಜಮೀನು ಮಂಜೂರು, ಎಸ್ಟಿ ಮೀಸಲು ವಿಧಾನಸೌಧದ ಎದುರು ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆ, ಸಿಗಂದೂರು ಚೌಡೇಶ್ವರಿ ದೇವಸ್ಥಾನ ವಿರುದ್ಧದ ಮೊಕದ್ದಮೆ ಹಿಂಪಡೆದು ದೇವಾಲಯಕ್ಕೆ ಭದ್ರತೆ, ಅಗತ್ಯ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿದರು.
ಮದ್ಯ ಮಾರಾಟದಲ್ಲಿ ಈಡಿಗ ಸೇರಿ ೨೬ ಪಂಗಡÀಗಳಿಗೆ ಶೇ.೫೦ರಷ್ಟು ಮೀಸಲು, ಕೋಟಿ ಚೆನ್ನಯ್ಯ ಅವರ ಜನ್ಮಸ್ಥಳ, ಐಕ್ಯಸ್ಥಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಕನಿಷ್ಠ ೧೦೦ ಕೋಟಿ ರೂ. ಕಾಯ್ದಿರಿಸಡಬೇಕು, ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪನೆ, ಒಂದು ವಿವಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಘೋಷಣೆಗೆ ಮನವಿ ಮಾಡಿದರು.
ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ -ೆ.೧೨ರಿಂದ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಆಮರಣಾಂತ ನಿರಶನ ನಡೆಸುವುದಾಗಿ ಸ್ವಾಮೀಜಿ ಎಚ್ಚರಿಸಿದರು.
ಬಸವಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಮೂರ್ತಿ ಸ್ವಾಮೀಜಿ, ಶಾಸಕ ಗುರುಮೆ ಸುರೇಶ್ ಶೆಟ್ಟಿ, ರಾಷ್ಟಿçÃಯ ಈಡಿಗ ಮಹಾ ಮಂಡಳದ ರಾಜ್ಯಾಧ್ಯಕ್ಷ ಸಿ.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಲೋಕೇಶ್, ತಾಲೂಕು ಅಧ್ಯಕ್ಷ ಎಚ್.ಒ.ಜಗದೀಶ್ ಗುಂಡೇರಿ, ಉದ್ಯಮಿಗಳಾದ ಪ್ರವೀಣ್ ಚಂದ್ರ, ಉಪಾಧ್ಯಕ್ಷ ಮನು, ಅಂಬುಜಮ್ಮ, ಕುಮಾರಸ್ವಾಮಿ, ನಾಗೇಂದ್ರ ಪ್ರಸಾದ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net