ಚಿತ್ರದುರ್ಗದಲ್ಲಿ ಶುಕ್ರವಾರ ಆಯೋಜಿಸಿದ್ದ ಲತಾ ಅಭಿವÊದ್ಧಿ ತರಬೇತಿ ಕರ‍್ಯಕ್ರಮದ ಸಮಾರೋಪದಲ್ಲಿ ಎಂ.ಪಿ.ಪ್ರವೀಣ್, ಶಿವಾನಂದ ಯಲಿಗಾರ್, ರಮೇಶ್ , ಪಿ. ವಿಜಯಕುಮಾರ್ ಹಾಗೂ ಶಿಬಿರಾರ್ಥಿಗಳು ಇದ್ದರು.
ಪ್ರತಿ ಉದ್ಯಮಿಯೂ ಆರ್ಥಿಕ ಶಿಸ್ತು ಕಟ್ಟುನಿಟ್ಟಾಗಿ ಪಾಲಿಸಿದರೆ ಉದ್ಯಮದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ಪಿ. ಪ್ರವೀಣ್ ಅಭಿಪ್ರಾಯಪಟ್ಟರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡದ ಸಿಡಾಕ್‌ನಿಂದ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ೧೦ ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದÀರು.
ಬ್ಯಾಂಕಿAಗ್ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಂಡು ಸ್ವಂತ ಉದ್ಯೋಗ ಸ್ಥಾಪಿಸುವುದರ ಜತೆಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ಸಲಹೆ ನೀಡಿದರು.
ಬ್ಯಾಂಕ್‌ಗಳಿAದ ಸಾಲ ಸೌಲಭ್ಯ ಪಡೆಯುವ ವಿವಿಧ ಹಂತಗಳ ಬಗ್ಗೆ ಸುದೀರ್ಘ ಮಾಹಿತಿ ನೀಡಿದ ಅವರು,ನೂತನವಾಗಿ ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳನ್ನು ಅಭಿನಂದಿಸಿದರು. ಉದ್ಯಮ ಆರಂಭಿಸುವ ಹಂತದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಹಲವು ಪ್ರಾಯೋಗಿಕ ಸಲಹೆಗಳನ್ನು ಹಂಚಿಕೊAಡರು.
ಚಿತ್ರದುರ್ಗ ಸಿಡಾಕ್ ಉಪನಿರ್ದೇಶಕ ಶಿವಾನಂದ ಯಲಿಗಾರ್ ಮಾತನಾಡಿ, ಸ್ವಂತ ಉದ್ಯೋಗ ಪ್ರಾರಂಭಿಸುವವರು ಸ್ವಯಂ ಉದ್ಯೋಗಿಗಳಾಗದೆ ಮತ್ತಷ್ಟು ಜನರಿಗೆ ಕೆಲಸ ನೀಡುವ ಉದ್ಯೋಗದಾತರಾಗುತ್ತಾರೆ. ಈ ನಿಟ್ಟಿನಲ್ಲಿ ಸರ್ಕಾರ ಉದ್ಯಮ ಶೀಲ ತೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.
ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಅಽÃಕ್ಷಕ ರಮೇಶ್ ಇದ್ದರು. ಶಿಬಿರಾರ್ಥಿ ಪವಿತ್ರಾ ಪ್ರಾರ್ಥಿಸಿದರು. ತಿಪ್ಪೇಸ್ವಾಮಿ ಸ್ವಾಗತಿಸಿ, ಮಾರುತಿ ವಂದಿಸಿದರು. ಸಿಡಾಕ್ ತರಬೇತುದಾರ ಪಿ.ವಿಜಯಕುಮಾರ ನಿರೂಪಿಸಿದರು. ತರಬೇತಿ ಪೂರ್ಣಗೊಳಿಸಿದ ೩೧ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.