ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಸಾವಿರ ರೂ. ದಂಡ

 ಚಿತ್ರದುರ್ಗದಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೆÊ ಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ  ವಿಶ್ವ ತಂಬಾಕು ರಹಿತ ದಿನದ ಪೋಸ್ಟರ್‌ಗಳನ್ನು ಡಿಸಿ ಟಿ. ವೆಂಕಟೇಶ್ ಬಿಡುಗಡೆ ಮಾಡಿದರು. ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿ ಭಾಗೀಯ ಸಂಯೋಜಕ ಮಹಂತೇಶ್‌ಉಳ್ಳಾಗಡ್ಡಿ, ಬಿ.ಎಂ. ಪ್ರಭುದೇವ, ಡಿಎಚ್‌ಒ ಡಾ. ಎನ್. ಕಾಶಿ, ಡಾ.ಡಿ.ಎಂ. ಅಭಿನವ್, ಡಾ. ಬಿ.ವಿ. ಗಿರೀಶ್, ರೇಷ್ಮಾಹಾನಗಲ್, ಎಸ್.ಲಕ್ಷಿ÷್ಮÃ ಇತರರು ಇದ್ದರು.
ಚಿತ್ರದುರ್ಗದಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೆÊ ಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಪೋಸ್ಟರ್‌ಗಳನ್ನು ಡಿಸಿ ಟಿ. ವೆಂಕಟೇಶ್ ಬಿಡುಗಡೆ ಮಾಡಿದರು. ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿ ಭಾಗೀಯ ಸಂಯೋಜಕ ಮಹಂತೇಶ್‌ಉಳ್ಳಾಗಡ್ಡಿ, ಬಿ.ಎಂ. ಪ್ರಭುದೇವ, ಡಿಎಚ್‌ಒ ಡಾ. ಎನ್. ಕಾಶಿ, ಡಾ.ಡಿ.ಎಂ. ಅಭಿನವ್, ಡಾ. ಬಿ.ವಿ. ಗಿರೀಶ್, ರೇಷ್ಮಾಹಾನಗಲ್, ಎಸ್.ಲಕ್ಷಿ÷್ಮÃ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಲೆ, ದೇವಸ್ಥಾನ ಹಾಗೂ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತಗೊಳಿಸಿ
  • ಅಽಕಾರಿಗಳಿಗೆ ಡಿಸಿ ಟಿ.ವೆಂಕಟೇಶ್ ನಿರ್ದೇಶನ
  • ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೆÊ ಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆ
ಚಿತ್ರದುರ್ಗ: ಜಿಲ್ಲೆಯ ಶಾಲಾ, ಕಾಲೇಜು, ದೇವಸ್ಥಾನಗಳು ಹಾಗೂ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ವಲಯವೆಂದು ಘೋಷಿಸುವಂತೆ ಜಿಲ್ಲಾಽಕಾರಿ ಟಿ. ವೆಂಕಟೇಶ್ ಅಽಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೆÊ ಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಂಬಾಕು ಉತ್ಪನ್ನಗಳ ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆ ಕಟ್ಟುನಿಟ್ಟಿನ ಜಾರಿಗಾಗಿ ಪೊಲೀಸ್, ಆ ರೋಗ್ಯ, ಶಿಕ್ಷಣ ಮತ್ತು ಸ್ಥಳೀಯ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಶಿಕ್ಷಣ ಇಲಾಖೆ ಜಿಲ್ಲೆಯ ಎಲ್ಲ ಶಾಲೆ ಹಾಗೂ ಕಾಲೇಜುಗಳ ಆವರಣವನ್ನು ಕಡ್ಡಾಯವಾಗಿ ತಂಬಾಕು ಮುಕ್ತ ವಲಯವೆಂದು ಘೋ ಷಿಸಬೇಕು. ವಿಶೇಷವಾಗಿ ಇಂಜಿನಿಯರಿAಗ್, ವೈದ್ಯಕೀಯ ಕಾಲೇಜುಗಳ ಆವರಣದಲ್ಲಿ ತಂಬಾಕು ಬಳಕೆಗೆ ಅವಕಾಶ ನೀಡಬಾರ ದೆಂದು ನಿರ್ದೇಶಿಸಿದರು.
ಜಿಲ್ಲೆಯ ಎಲ್ಲ ಮುಜರಾಯಿ ದೇವಸ್ಥಾನಗಳನ್ನು ತಂಬಾಕು ಮುಕ್ತ ಕ್ಷೇತ್ರಗಳನ್ನಾಗಿ ಘೋಷಿಸಬೇಕು. ಪ್ರತಿ ಸರ್ಕಾರಿ ಕಚೇರಿಯೂ ತಂಬಾಕು ಮುಕ್ತವಾಗಿರಬೇಕು ಮತ್ತು ಕಚೇರಿಗಳಲ್ಲಿ ತಂಬಾಕು ನಿಷೇಧ -Àಲಕ ಸಾರ್ವಜನಿಕರಿಗೆ ಕಾಣಿಸುವಂತಿರಬೇಕು.
ಕಚೇರಿಗಳಿಗೆ ಬರುವವರು ತಂಬಾಕು ಪದಾರ್ಥ ಬಳಸಿದರೆ ಕ್ರಮ ಕೈಗೊಳ್ಳಬೇಕು. ನಿರಂತರ ಮಾನಿಟರಿಂಗ್ ಮೂಲಕ ಜಾಗೃತಿ ಮೂಡಿಸಬೇಕೆಂದರು.
ರಾಜ್ಯತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಂತೇಶ್ ಉಳ್ಳಾಗಡ್ಡಿ ಮಾತನಾಡಿ, ಕೋಟ್ಪಾ ತಿದ್ದುಪಡಿ ಕಾಯ್ದೆ ಅನ್ವಯ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡಿದರೆ ವಿಽಸ ಲಾಗುತ್ತಿದ್ದ ದಂಡದ ಮೊತ್ತವನ್ನು ೨೦೦ ರಿಂದ ೧೦೦೦ಕ್ಕೆ ಹೆಚ್ಚಿಸಲಾಗಿದೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ದೊಂದಿಗೆ ಯಾವುದೇ ತಂಬಾಕು ಉತ್ಪನ್ನಗಳ ಬಳಕೆ ನಿಷೇಽಸಲಾಗಿದೆ.
ತಂಬಾಕು ಉತ್ಪನ್ನಗಳ ಖರೀದಿ ವಯೋಮಿತಿಯನ್ನು ೧೮ ವರ್ಷದಿಂದ ೨೧ಕ್ಕೆ ಏರಿಸÀಲಾಗಿದೆ. ಹುಕ್ಕಾ ಬಾರ್‌ಗಳ ಕಾರ್ಯಾ ಚರಣೆ, ಮಾರಾಟ ಹಾಗೂ ಪ್ರದರ್ಶನವನ್ನು ರಾಜ್ಯದಲ್ಲಿ ಸಂಪೂರ್ಣ ನಿಷೇಽಸಲಾಗಿದೆ ಎಂದರು.
ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತೆ ಆಶಾಲತಾ ಹೇಳಿದರು. ಬಾರ್ ಕೌಂಟರ್‌ಗಳ ಬಳಿ ಧೂಮಪಾನ ನಿಷೇಧ -Àಲಕ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

೩೦ಕ್ಕಿಂತ ಹೆಚ್ಚು ಆಸನ ಸಾಮರ್ಥ್ಯವಿರುವ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಗರಸಭೆ ಅಥವಾ ಪಿಡಿಒ ಅವರಿಂದ ಅನುಮತಿ ಪಡೆದ ನಂತರವೇ ಪ್ರತ್ಯೇಕ ಧೂಮಪಾನ ವಲಯ ಗುರುತಿಸಲು ಅವಕಾಶ ನೀಡಲಾಗುವುದು. ಪರವಾನಗಿ ಪಡೆದ ಮಳಿಗೆಗಳಲ್ಲಿ ೨೧ ವರ್ಷದೊಳಗಿನವರಿಗೆ ತಂಬಾಕು ಮತ್ತು ಮದ್ಯ ಮಾರಾಟ ನಿಷೇಽಸಲಾಗಿದೆ ಎಂಬ ಬೋರ್ಡ್ಗಳನ್ನು ಕಡ್ಡಾಯವಾಗಿ ಹಾಕಿಸ ಲಾಗಿದೆ ಎಂದು ತಿಳಿಸಿದರು.
ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ ಮಾತನಾಡಿ, ಜಿಲ್ಲೆಯ ಗ್ರಾಮಗಳನ್ನು ತಂಬಾಕು ಮುಕ್ತ ಗೊಳಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಜಿಲ್ಲೆಯ ಪ್ರಮುಖ ದೇವಸ್ಥಾನಗಳು ಮತ್ತು ಪ್ರವಾಸಿ ತಾಣಗಳನ್ನು ತಂಬಾಕು ಮು ಕ್ತ ಪ್ರದೇಶಗಳನ್ನಾಗಿ ಘೋಷಿಸಲಾಗುತ್ತಿದೆ. ಈಗಾಗಲೇ ೪ ಪ್ರಮುಖ ದೇವಸ್ಥಾನಗಳ ವರದಿ ಸಲ್ಲಿಸಲಾಗಿದ್ದು, ಉಳಿದ ದೇವ ಸ್ಥಾನಗಳಲ್ಲೂ ನಿಯಮ ಜಾರಿಗೆ ತರಲು ಅಽಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ವಿಶ್ವ ತಂಬಾಕು ರಹಿತ ದಿನದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಡಿಎಚ್‌ಒ ಡಾ.ಎನ್. ಕಾಶಿ, ಜಿಲ್ಲಾ ಆರ್‌ಸಿಎಚ್ ಅಽಕಾರಿ ಡಾ.ಡಿ.ಎಂ.ಅಭಿನವ್, ನಗರಾಭಿವÊದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಸ್.ಲಕ್ಷಿ÷್ಮÃ, ಡಿಡಿಪಿಐ ಎಂ.ಆರ್. ಮಂಜುನಾಥ್ ಮತ್ತಿತರ ಅಽಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net